News

ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆಗೆ ಬೇಸಿಗೆ ರೈತರ ಬೆಳೆ ಸಮೀಕ್ಷೆ 2020-21 ಆ್ಯಪ್ ಬಿಡುಗಡೆ

20 March, 2021 8:39 PM IST By:

ಪ್ರಸಕ್ತ 2020-21ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಯು ಜಿಲ್ಲೆಯಾದ್ಯಂತ ಆರಂಭಗೊಂಡಿದೆ. ಸರ್ಕಾರದ ಆದೇಶದನ್ವಯ ಈ ಬಾರಿ ಬೆಳೆ ಸಮೀಕ್ಷೆ ಕಾರ್ಯಕ್ಕಾಗಿ ರೈತರು “ಬೇಸಿಗೆ ರೈತರ ಬೆಳೆ ಸಮೀಕ್ಷೆ 2020-21” ಆ್ಯಪ್ ಮೂಲಕ ತಮ್ಮ ಸ್ವತಃ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಹಾಗೂ ಕಮಲಾಪುರ ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ತಿಳಿಸಿದ್ದಾರೆ.

ಕಲಬುರಗಿ ಹಾಗೂ ಕಮಲಾಪೂರ ತಾಲೂಕಿನ ರೈತರು ತಮ್ಮ ಜಮೀನಿನಲ್ಲಿ ಬೇಸಿಗೆ ಹಂಗಾಮಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು “ಬೇಸಿಗೆ ರೈತರ ಬೆಳೆ ಸಮೀಕ್ಷೆ 2020-21” (Summer Farmer Crop Survey App 2020-21) ಎಂಬ ಆ್ಯಪ್‍ನ್ನು ತಮ್ಮ ಮೊಬೈಲ್ ಮೂಲಕ ಗೂಗಲ್ ಪ್ಲೇ-ಸ್ಟೋರ್‍ನಿಂದ ಈ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ರೈತರು  ನಿಗದಿತ ಅವಧಿಯೊಳಗಾಗಿ ಬೆಳೆ ವಿವರ ದಾಖಲಿಸಬೇಕು.

ಇದಲ್ಲದೇ ರೈತ ಬಾಂಧವರು ಕೃಷಿ, ಕಂದಾಯ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸೌಲಭ್ಯ ಪಡೆಯಲು ರೈತರು ಕಡ್ಡಾಯವಾಗಿ ಫ್ರೂಟ್ಸ್ (Fruits) ನೋಂದಣೆ ಮಾಡಬೇಕಾಗಿರುತ್ತದೆ. ಆದ್ದರಿಂದ ರೈತರು ತಮ್ಮ ಹೆಸರು ಫ್ರೂಟ್ಸ್ (Fruits) ನಲ್ಲಿ ನೋಂದಾಯಿಸುವ ಸಲುವಾಗಿ ತಮ್ಮ ಹಿಡುವಳಿ ಪತ್ರ, ಬ್ಯಾಂಕ ಖಾತೆ ವಿವರ, ಆಧಾರ್ ಕಾರ್ಡ್ ಹಾಗೂ ಪರಿಶಿಷ ಜಾತಿ, ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಗಳ ದಾಖಲಾತಿಗಳನ್ನು ಕೃಷಿ, ಕಂದಾಯ, ತೋಟಗಾರಿಕೆ ಇಲಾಖಾ ಅಧಿಕಾರಿಗಳಿಗೆ ನೀಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಣಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ರಮ ಯೋಜನೆಗಳಡಿ ಶಿಕ್ಷಣಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.

ಅವಳಿ ನಗರದಲ್ಲಿ ವಾಸಿಸುತ್ತಿರುವ ಐಐಟಿ/ಡಿಪ್ಲೊಮಾ ಅಥವಾ ವೃತ್ತಿಪರ ಕೋರ್ಸ್‌ ಅನ್ನು ಖಾಸಗಿ ವಿದ್ಯಾ ಸಂಸ್ಥೆಗಳಲ್ಲಿರುವ ವಿದ್ಯಾರ್ಥಿಗಳಿಗೆ 20 ಸಾವಿರ, ಟೂಲ್ ಕಿಟ್ ಖರೀದಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನಕ್ಕೆ ತರಬೇತಿ ಪಡೆಯವ ವಿದ್ಯಾರ್ಥಿಗಳಿಗೆ 30 ಸಾವಿರ, ಶೌಚಾಲಯ ನಿರ್ಮಾಣಕ್ಕೆ 20 ಸಾವಿರ, ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ  ಹೆಣ್ಣು ಮಕ್ಕಳಿಗೆ ಬ್ಯೂಟಿಷನ್‌ ಕಿಟ್ ಖರೀದಿಗೆ 25 ಸಾವಿರ, ವಾಹನ ತರಬೇತಿ ಹಾಗೂ ಚಾಲನಾ ಪರವಾನಗಿ ಹೊಂದಿದ ನಿರುದ್ಯೋಗಿ ಯುವಕರಿಗೆ ರಿಕ್ಷಾ ಖರೀದಿಗೆ 50 ಸಾವಿರ, ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ ಫಲಾನುಭವಿಗಳಿಗೆ ಮನೆ ದುರಸ್ತಿಗೆ 50 ಸಾವಿರ ಹಾಗೂ ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಗೆ 50 ಸಾವಿರ ಸಹಾಯಧನ ನೀಡಲಾಗುವುದು.

ಪಾಲಿಕೆ ವಲಯ ಕಚೇರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಮೇ 3ರ ಸಂಜೆ 5ರೊಳಗೆ ವಲಯ ಕಚೇರಿಗಳಿಗೆ ಸಲ್ಲಿಸಬೇಕು ಎಂದು ಆಯುಕ್ತ ಡಾ. ಸುರೇಶ ಇಟ್ನಾಳ್ ತಿಳಿಸಿದ್ದಾರೆ.