1. ಸುದ್ದಿಗಳು

ನಂದಿಗ್ರಾಮದಲ್ಲಿ ಶಿಷ್ಯನೆದುರು ಸೋಲುಂಡ ಮಮತಾ.. ಸುವೇಂದು ಅಧಿಕಾರಿಗೆ ಜಯ

Mamata benarjee

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ ಭರ್ಜರಿ ಗೆಲುವು ದಾಖಲಿಸಿ, ಐತಿಹಾಸಿಕ ಸಾಧನೆ ಮಾಡಿದೆ. ಆದರೆ ಇದರ ಮಧ್ಯೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ.

ಇಡೀ ದೇಶದ ಗಮನ ಸೆಳೆದಿದ್ದ ನಂದಿಗ್ರಾಮ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ‌ ಮಮತಾ ಬ್ಯಾನರ್ಜಿ‌1957 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.

ಆರಂಭದಲ್ಲಿ ಮಮತಾ ಬ್ಯಾನರ್ಜಿ 1200 ಮತಗಳಿಂದ ಗೆಲುವು ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಇದಾದ ಬಳಿಕ ಸುವೇಂದು ಅಧಿಕಾರಿ ಗೆಲುವು ಸಾಧಿಸಿದ್ದಾರೆ ಎನ್ನಲಾಗುತ್ತಿದ್ದಂತೆ ಟಿಎಂಸಿ ಮರುಮತ ಎಣಿಕೆ ಮಾಡುವಂತೆ ಸೂಚನೆ ನೀಡಿತ್ತು. ಇದೀಗ ಫಲಿತಾಂಶ ಬಹಿರಂಗಗೊಂಡಿದ್ದು, ಮಮತಾ ವಿರುದ್ಧ ಸುವೇಂದು ಅಧಿಕಾರಿ ಜಯ ಸಾಧಿಸಿದ್ದಾರೆ.
ಪಕ್ಷವನ್ನು ಅಧಿಕಾರಕ್ಜೆ ತರುವಲ್ಲಿ ಸಫಲವಾಗಿರುವ ಮಮತಾ ಜಿದ್ದಾಜಿದ್ದಿನ ಅಖಾಡವಾಗಿದ್ದ ನಂದಿಗ್ರಾಮದಲ್ಲಿ ಸೋಲು ಕಂಡಿದ್ದಾರೆ.
ಜನರ ತೀರ್ಪಿಗೆ ತಲೆಬಾಗುವುದಾಗಿ ಪ್ರತಿಕ್ರಿಯಿಸಿರುವ ಮಮತಾ, ಈ ಸೋಲಿನಿಂದ ತಮಗೆ ಹಿನ್ನಡೆಯಾಗಿಲ್ಲ.ಚುನಾವಣಾ ಆಯೋಗದ ವಿರುದ್ದ ತೀವ್ರವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ವಿರುದ್ಧ ವೂ ಕಿಡಿಕಾರಿರುವ‌ ಮಮತಾ ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದಾರೆ.
ಬೆಳಗ್ಗೆಯಿಂದ ಆರಂಭವಾದ ಮತ ಎಣಿಕೆಯಲ್ಲಿ ಟಿಎಂಸಿ ನಾಗಾಲೋಟದಲ್ಲಿ ಮುನ್ನಡೆಯುತ್ತಿದ್ದರೆ, ಮಮತಾ ಬ್ಯಾನರ್ಜಿ ಅವರು ಮಾತ್ರ ತೀವ್ರ ಹಿನ್ನಡೆ ಅನುಭವಿಸಿದ್ದರು. ಒಂದು ಕಾಲದ ತಮ್ಮ ಆಪ್ತ ಸಹಾಯಕ ಸುವೇಂದು ಅಧಿಕಾರಿ ಟಿಎಂಸಿಗೆ ಗುಡ್​ಬೈ ಹೇಳಿ, ಬಿಜೆಪಿಯಿಂದ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಅಧಿಕಾರಿಗೆ ಪಾಠ ಕಲಿಸುವ ಸಲುವಾಗಿ ಮಮತಾ ಬ್ಯಾನರ್ಜಿ ಅವರು ತಾವು ಸ್ಪರ್ಧೆ ಮಾಡುತ್ತಿದ್ದ ಕ್ಷೇತ್ರವನ್ನು ಬಿಟ್ಟು ನಂದಿಗ್ರಾಮದಲ್ಲಿ ಸ್ಪರ್ಧೆ ಮಾಡಿದ್ದರು. ಆದರೆ, ಅವರು ಅಂದುಕೊಂಡಂತೆ ಗೆಲುವು ಅಷ್ಟು ಸುಲಭವಾಗಿರಲಿಲ್ಲ. ಮೊದಲ ಸುತ್ತಿನ ಮತ ಎಣಿಕೆ ಆರಂಭದಿಂದಲೂ ಮಧ್ಯಾಹ್ನದವರೆಗೂ ಸುವೇಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದರು. ಒಂದು ಹಂತದಲ್ಲಿ 30 ಸಾವಿರಕ್ಕೂ ಅಧಿಕ ಮತಗಳಿಂದ ಅಧಿಕಾರಿ ಮುಂದಿದ್ದರು. ಆದರೆ, ಮಧ್ಯಾಹ್ನದ ನಂತರ ಫಲಿತಾಂಶದ ಫಲಿತಾಂಶದ ಚಿತ್ರಣ ಬದಲಾಗಿ ಅಂತಿಮವಾಗಿ ಸುವೆಂದು ಮುಖರ್ಜಿ 1957 ಅಲ್ಪಮತಗಳ‌ ಅಂತರದಿಂದ ಗೆಲುವು ಸಾಧಿಸಿದರು.

290 ಕ್ಷೇತ್ರಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 200 ಸ್ಥಾನಗಳನ್ನು ಗೆಲ್ಲುವಲ್ಲಿ ಸಫಲವಾಗಿದೆ. ಆದರೆ, ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಮತಾ ತಾವು ಸ್ಪರ್ಧಿಸಿದ್ದ ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಗೆಲುವು ಸಾಧಿಸುವಲ್ಲಿ ವಿಫಲರಾಗಿ ಮುಖಭಂಗ ಅನುಭವಿಸಬೇಕಾಯಿತು.

Published On: 03 May 2021, 08:46 AM English Summary: Suvendu adhikari win against cm mamata banerjee

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.