1. ಸುದ್ದಿಗಳು

ಸಿಹಿಸುದ್ದಿ: ಪಡಿತರ ಚೀಟಿ 5 ಕೆ.ಜಿ ಬದಲಿಗೆ 6 ಕೆ.ಜಿ ಅಕ್ಕಿ ವಿತರಣೆ!

Hitesh
Hitesh
Sweet news: 6 kg rice distribution instead of ration card 5 kg!

ಪಡಿತರ ಚೀಟಿದಾರರಿಗೆ ಐದು ಕೆಜಿ ಅಕ್ಕಿ ಜತೆಗೆ ಹೆಚ್ಚುವರಿ ಒಂದು ಕೆಜಿ ಅಕ್ಕಿ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ.

Weather Update: ರಾಜ್ಯದಲ್ಲಿ ಹೆಚ್ಚಾದ ಚಳಿ ವಾತಾವರಣ  

ಈ ತಿಂಗಳಿಂದಲೇ ಹೆಚ್ಚುವರಿ ಅಕ್ಕಿ ಪಡಿತರ ಚೀಟಿದಾರರಿಗೆ ದೊರೆಯಲಿದೆ. ಈ ಸಂಬಂಧ ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಇಲಾಖೆ ಆದೇಶ ಹೊರಡಿಸಿದೆ. 2022-2362 ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿದಾರರಿಗೆ 5 ಕೆಜಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಈ ಧಾನ್ಯದೊಂದಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಆದೇಶಿಸಲಾಗಿದೆ.

Pm Kisan| ಪಿ.ಎಂ ಕಿಸಾನ್‌ ಅಪ್ಡೇಟ್‌: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ 

ಕಾಂಗ್ರೆಸ್ ಭರವಸೆಗೆ ಬ್ರೇಕ್: 2023ರ ಚುನಾವಣೆಯಲ್ಲಿ ಅನ್ನಭಾಗ್ಯ ಯೋಜನೆಯನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದ ಕಾಂಗ್ರೆಸ್‌ಗೆ 1 ಕೆಜಿ ಅಕ್ಕಿ ಹೆಚ್ಚುವರಿಯಾಗಿ ನೀಡುವುದಾಗಿ ಆದೇಶ ಹೊರಡಿಸುವ ಮೂಲಕ ಬಿಜೆಪಿ ಸರ್ಕಾರ ಗುದ್ದು ನೀಡಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡುತ್ತಿದ್ದಾರೆ.

Siddaramaiah| ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ಹಿಂಪಯಲು ಸಿದ್ದರಾಮಯ್ಯ ಆಗ್ರಹ | Apmc 

ಇದು ರಾಜ್ಯದ ಪಡಿತರ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಹಂಚಿಕೆ
ಯಾಗುತ್ತಿದ್ದ 10 ಕೆ.ಜಿ. ಅಕ್ಕಿಯ ಬದಲಿಗೆ ಇನ್ನು ಮುಂದೆ ಕೇವಲ 6 ಕೆಜಿ ಅಕ್ಕಿ ಮಾತ್ರ ಸಿಗಲಿದೆ. ಕೋವಿಡ್‌ ಹಿನ್ನೆಲೆಯಲ್ಲಿ 2020-21ರ ಮೇ ತಿಂಗಳಿನಿಂದ 2022ರ ಡಿಸೆಂಬರ್‌ 31ರವರೆಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಸಾರ್ವಜನಿಕ ವಿತರಣ ಪದ್ಧತಿಯಲ್ಲಿ ರಾಜ್ಯದ ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆ.ಜಿ. ಅಕ್ಕಿಯನ್ನು ವಿತರಿಸುತ್ತಿತ್ತು. ಇದರೊಂದಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ರಾಜ್ಯ ಸರ್ಕಾರವೂ ಪ್ರತಿ ಫಲಾನುಭವಿಗೆ ತಲಾ 5 ಕೆ.ಜಿ. ಅಕ್ಕಿ  ನೀಡುತ್ತಿತ್ತು.  ಆದರೆ, ಈವರೆಗೆ ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ. ಅಕ್ಕಿ ಉಚಿತವಾಗಿ ಲಭ್ಯವಾಗುತ್ತಿತ್ತು. 

Weather Update: ರಾಜ್ಯದಲ್ಲಿ ಹೆಚ್ಚಾದ ಚಳಿ ವಾತಾವರಣ

Sweet news: 6 kg rice distribution instead of ration card 5 kg!

ಇದೀಗ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ವಿತರಿಸುತ್ತಿದ್ದ ತಲಾ 5 ಕೆ.ಜಿ. ಅಕ್ಕಿಯನ್ನು 2022 ಡಿಸೆಂಬರ್‌ 31ಕ್ಕೆ ಅಂತ್ಯಗೊಳಿಸಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ರಾಜ್ಯ ಸರ್ಕಾರದ ಮೂಲಕ ವಿತರಿಸುತ್ತಿದ್ದ ಅಕ್ಕಿಯನ್ನು ಸ್ಥಗಿತಗೊಳಿಸಿದೆ. ಅಲ್ಲದೇ ನೇರವಾಗಿ ತಾನೇ ಉಚಿತವಾಗಿ ಫಲಾನುಭವಿಗಳಿಗೆ ತಲಾ 5 ಕೆ.ಜಿ. ಅಕ್ಕಿಯಂತೆ ವಿತರಿಸುವುದಾಗಿ  ತಿಳಿಸಿದೆ.

ಈ ಹಿಂದೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪ್ರತಿ ತಿಂಗಳು 2.17 ಲಕ್ಷ ಮೆಟ್ರಿಕ್‌ ಟನ್‌(ಪ್ರತಿ ಯೂನಿಟ್‌ಗೆ 5 ಕೆ.ಜಿ.) ಆಹಾರ ಧಾನ್ಯ ಹಂಚಿಕೆಯಾಗುತ್ತಿತ್ತು. ಅದಕ್ಕಾಗಿ ರಾಜ್ಯ ಸರ್ಕಾರ ಪ್ರತಿ ಕೆ.ಜಿ. ಅಕ್ಕಿಗೆ ತಲಾ 3 ರು. ಹಾಗೂ ಗೋಧಿಗೆ 2 ರು.ನಂತೆ ಹಣ ಪಾವತಿಸಿ ಪಡಿತರ ಆಹಾರ ಧಾನ್ಯವನ್ನು ಖರೀದಿಸಬೇಕಿತ್ತು. ಆದರೆ, ಈಗ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ಕೇಂದ್ರ ಸರ್ಕಾರವೇ ಉಚಿತವಾಗಿ ಪ್ರತಿ ಫಲಾನುಭವಿಗೆ ತಲಾ 5 ಕೆ.ಜಿ.ಯಂತೆ ಅಕ್ಕಿಯನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರದ ಪಾಲಿನ ಜೊತೆಗೆ ಹೆಚ್ಚುವರಿಯಾಗಿ ಕೇವಲ ಒಂದು ಕೆ.ಜಿ. ಅಕ್ಕಿಯನ್ನು ಮಾತ್ರ ವಿತರಿಸಲು ಆದೇಶ ಹೊರಡಿಸಿದೆ.

ಶ್ರೀಗಂಧದ ಮರ ಕಳವು ತಡೆಗೆ ಸರ್ಕಾರದಿಂದ ಮಾಸ್ಟರ್‌ ಪ್ಲಾನ್‌!

Published On: 04 January 2023, 12:41 PM English Summary: Sweet news: 6 kg rice distribution instead of ration card 5 kg!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.