News

ರೈತರಿಗೆ ಗುಡ್ನ್ಯೂಸ್: ರಾಜ್ಯದಲ್ಲಿ ಮೊದಲ “ಕ್ಷೀರಾಭಿವೃದ್ಧಿ ಬ್ಯಾಂಕ್‌ ಸ್ಥಾಪನೆ”; 260 ಕೋಟಿ ಮೀಸಲು..ಕಡಿಮೆ ಬಡ್ಡಿದರದಲ್ಲಿ ಸಾಲಸೌಲಭ್ಯ!

16 May, 2022 10:02 AM IST By: Kalmesh T
The first “Milk Development Bank” in the state; 260 crores reserve…

ಹೈನುಗಾರಿಕೆ ಮಾಡುವ ರೈತರ ಕ್ಷೇಮಾಭಿವೃದ್ಧಿ ಮತ್ತು ಆರ್ಥಿಕ ಸ್ಥಿತಿಯ ಅನುಕೂಲಕ್ಕಾಗಿ "ರಾಜ್ಯದಲ್ಲಿ ಕ್ಷೀರ ಅಭಿವೃದ್ಧಿ" ಬ್ಯಾಂಕ್ ಸ್ಥಾಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಗೋಧಿ ರಫ್ತು ನಿರ್ಬಂಧ ಆಹಾರದ ಬೆಲೆ ನಿಯಂತ್ರಿಸುತ್ತದೆ: ಭಾರತ ಸರ್ಕಾರ!

IMD: ರೈತಮಿತ್ರರಿಗೆ ಹವಾಮಾನ ಇಲಾಖೆಯಿಂದ ಶುಭ ಸುದ್ದಿ; ವಾಡಿಕೆಗಿಂತ ಮೊದಲೆ ರಾಜ್ಯದಲ್ಲಿ ಮುಂಗಾರು ಮಳೆ!

ಕರ್ನಾಟಕದಲ್ಲಿ ಹೈನುಗಾರಿಕೆ ಕ್ಷೇತ್ರ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ಹೈನುಗಾರಿಕೆ ಮಾಡುವ ರೈತರ ಕ್ಷೇಮಾಭಿವೃದ್ಧಿ ಮತ್ತು ಆರ್ಥಿಕ ಸ್ಥಿತಿಯ ಅನುಕೂಲಕ್ಕಾಗಿ ರಾಜ್ಯದಲ್ಲಿ ಕ್ಷೀರ ಅಭಿವೃದ್ಧಿ ಬ್ಯಾಂಕ್ ಸ್ಥಾಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಬ್ಯಾಹಟ್ಟಿ ಗ್ರಾಮದ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

3ನೇ ಮಗುವಿಗೆ ಜನ್ಮ ನೀಡಿದರೆ 11 ಲಕ್ಷ ರೂಪಾಯಿ ಬೋನಸ್ ನೀಡತ್ತೆ ಈ ಕಂಪನಿ.. ಜೊತೆಗೆ 1 ವರ್ಷ ರಜೆ! ಏನಿದು Policy?

ರೈತರಿಗೆ ಸಿಹಿ ಸುದ್ದಿ: ಮಾರುಕಟ್ಟೆಯಲ್ಲಿ ಗೋಧಿಗೆ ಬಂಪರ್ ಬೆಲೆ: ರೈತರ ಮುಖದಲ್ಲಿ ನಗೆ!

“ಹೈನುಗಾರಿಕೆ ಮಾಡುವವರ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಂತೆ ಹೈನುಗಾರಿಕೆ ಮಾಡುವವರಿಗೆ ಅನುಕೂಲವಾಗಲೆಂದು ಕ್ಷೀರ ಅಭಿವೃದ್ಧಿ ಬ್ಯಾಂಕ್ ಸ್ಥಾಪನೆ ಮಾಡಬೇಕೆಂದು ಕಳೆದ ಬಜೆಟ್ ನಲ್ಲಿ 260 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದೇವೆ. ಈ ವರ್ಷ ಬ್ಯಾಂಕ್ ನ್ನು ಖಂಡಿತ ಪ್ರಾರಂಭ ಮಾಡಲಾಗುವುದು” ಎಂದು ತಿಳಿಸಿದರು.

ಕ್ಷೀರ ಅಭಿವೃದ್ಧಿ ಬ್ಯಾಂಕ್ ಮೂಲಕ ಹಾಲು ಉತ್ಪಾದಿಸುವ ರೈತರಿಗೆ ಅವರ ಕಾರ್ಯ ಚಟುವಟಿಕೆಗಳಲ್ಲಿ ಅಭಿವೃದ್ಧಿ ಮಾಡಿಕೊಳ್ಳಲು ಕಡಿಮೆ ಬಡ್ಡಿದರದಲ್ಲಿ ಸಾಲಸೌಲಭ್ಯ ದೊರಕುವಂತೆ ಮಾಡಲಾಗುವುದು ಸಿಎಂ ಬೊಮ್ಮಾಯಿ ನುಡಿದರು.

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಕಾಲೇಜು ಪ್ರವೇಶಕ್ಕೆ 25,000 ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ₹8 ಲಕ್ಷ ನೀಡಲಿದೆ ಸರ್ಕಾರ!

ಯಶಸ್ವಿನಿ ಯೋಜನೆಯನ್ನು ಮತ್ತೊಮ್ಮೆ ಸ್ಥಾಪನೆ ಮಾಡಿದ್ದೇವೆ. ಕ್ಯಾಬಿನೆಟ್ನಲ್ಲಿ 530 ಕೋಟಿ ರೂಪಾಯಿ ಹಣದಷ್ಟು ರೈತರಿಗೆ ಡಿಸೇಲ್ ಸಬ್ಸಿಡಿ ಕೊಡುವಂತಹ ಕೆಲಸ ಮಾಡಿದ್ದೇವೆ.

ಕಳೆದ ವರ್ಷ 22 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲಸೌಲಭ್ಯ ಒದಗಿಸಲಾಗಿದೆ. ಈ ವರ್ಷ 33 ಲಕ್ಷ ರೈತರಿಗೆ ಈ ಸೌಲಭ್ಯ ವಿತರಿಸುವ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

PM GatiShakti: ಗ್ರಾಮೀಣ ಪ್ರದೇಶಗಳಲ್ಲಿ ಬ್ರಾಡ್ಬ್ಯಾಂಡ್ ಸೇವೆ ನೀಡಲು “GatiShakti Sanchar” ಪೋರ್ಟಲ್ ಪ್ರಾರಂಭ!

G7: ಉಕ್ರೇನ್ ವಿಶ್ವದ ಪ್ರಮುಖ ಧಾನ್ಯ ಪೂರೈಕೆದಾರರ ಪ್ರಭಾವಶಾಲಿ ಸಂಘಟನೆ ರಚಿಸಲು ಸಲಹೆ ನೀಡಿದೆ!

ಈಗಾಗಲೇ ರೈತನ ಮಕ್ಕಳಿಗೆ ಸಿಎಂ ಆದ ಮೂರೇ ಗಂಟೆಯಲ್ಲಿ ವಿದ್ಯಾನಿಧಿ ಯೋಜನೆ ಘೋಷಣೆ ಮಾಡಿದ್ದೇನೆ. ಈ ಮೂಲಕ ಎಂಟನೇ ತರಗತಿಗೆ ಬರುವ ರೈತನ ಹೆಣ್ಣು ಮಕ್ಕಳಿಗೆ ಎರಡು ಸಾವಿರ ರೂಪಾಯಿ ಶಿಷ್ಯವೇತನ ನೀಡುತ್ತಿದ್ದೇವೆ. ಇದು ಪಿಜಿವರೆಗೆ ಮುಂದುವರೆಯಲಿದೆ ಎಂದು ಸಿಎಂ ತಿಳಿಸಿದರು.