ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಂದ ದೇಶ ದಿವಾಳಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಗ್ಯಾರಂಟಿ ಜಾರಿಗೆ ಸರ್ಕಸ್ ಪ್ರಾರಂಭವಾಗಿದ್ದು, ಸರಣೆ ಸಭೆಗಳು ನಡೆದಿವೆ.
ಈ ನಡುವೆ ರಾಜಸ್ಥಾನದಲ್ಲೂ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಪ್ರಚಾರದಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು
ಕಾಂಗ್ರೆಸ್‌ನ ಗ್ಯಾರಂಟಿ ಸೂತ್ರಗಳ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಇನ್ನು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು
ಸಹ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, 100 ಯೂನಿಟ್ ಉಚಿತವಾಗಿ ನೀಡುವುದಾಗಿ ಭರವಸೆ ನೀಡಿದ್ದಾರೆ.
5 ಗ್ಯಾರಂಟಿ ಜಾರಿ ಸಂಬಂಧ ಸರ್ಕಾರದಿಂದ ಮಹತ್ವದ ಸಭೆ
ರಾಜ್ಯಾದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಪ್ರಮುಖ ಐದು ಗ್ಯಾರಂಟಿಗಳು
ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಮಹತ್ವದ ಪಾತ್ರ ವಹಿಸಿತ್ತು. ಹೀಗಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ
ಜನರಲ್ಲಿ ನಿರೀಕ್ಷೆ ಹೆಚ್ಚಾಗಿದ್ದು, ಇದೇ ಸಂದರ್ಭದಲ್ಲಿ ವಿರೋಧ ಪಕ್ಷಗಳೂ ಸಹ ಗ್ಯಾರಂಟಿ ಜಾರಿಗೆ ಪಟ್ಟು ಹಿಡಿದಿವೆ.
ಶುಕ್ರವಾರ ಗ್ಯಾರಂಟಿ ಸಂಬಂಧ ಮಹತ್ವದ ಚರ್ಚೆ ನಡೆಯಲಿದ್ದು, ಶುಕ್ರವಾರ ಸಂಜೆಯ ವೇಳೆಗೆ ಗ್ಯಾರಂಟಿ
ಜಾರಿ ಸಂಬಂಧ ಸ್ಪಷ್ಟವಾದ ಚಿತ್ರಣ ಸಿಗುವ ಸಾಧ್ಯತೆ ಇದೆ.
ಎರಡರಿಂದ ಮೂರು ದಿನ ಭಾರೀ ವರ್ಷಧಾರೆ
ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ.
ರಾಜ್ಯದ ಹಲವು ಭಾಗದಲ್ಲಿ ಮುಂಗಾರು ಪೂರ್ವ ವರ್ಷಧಾರೆ ಹೆಚ್ಚಾಗಿದೆ.
ಇನ್ನು ಮುಂದಿನ 24 ಗಂಟೆಯ ದಕ್ಷಿಣ ಒಳನಾಡಿನ ವಿವಿಧ ಭಾಗದಲ್ಲಿ ಮಳೆ ಮುಂದುವರಿಯಲಿದೆ ಎಂದು
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರ ಚಿಕ್ಕಮಗಳೂರು, ಹಾಸನ,
ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ
ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಅಬ್ಬರದ
ಮಳೆಯಾಗುವ ಸಾಧ್ಯೆತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.