1. ಸುದ್ದಿಗಳು

millets ಸಿರಿಧಾನ್ಯ ಬೆಳೆಗಳ ಪ್ರೋತ್ಸಾಹಕ್ಕೆ ಈ ಕ್ರಮ: ಸಿ.ಎಂ ಸಿದ್ದರಾಮಯ್ಯ, ಏನದು ?

Hitesh
Hitesh
ಸಿರಿಧಾನ್ಯಗಳ ಬೆಳೆಗಳ ಪ್ರೋತ್ಸಾಹಕ್ಕೆ ಕೇಂದ್ರ ಸ್ಥಾಪನೆ ಮಾಡುವುದಾಗಿ ಸಿ ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ

ಸಾವಯವ ಹಾಗೂ ಸಿರಿಧಾನ್ಯದ ಬಳಕೆ ಹಾಗೂ ಮಾರಾಟವನ್ನು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು,

ಇದೀಗ ಈ ನಿಟ್ಟಿನಲ್ಲಿ ಹಲವು ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ

ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ

ಅವರು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಢವಾಗಿ ಹಾಗೂ ಆರೋಗ್ಯವಂತರಾಗಿರಲು ಇಂದಿರಾ

ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿಧಾನ್ಯ ಬಳಸುವ ಸಂಬಂಧ ಶೀಘ್ರ ಸಂಬಂಧಪಟ್ಟ ಇಲಾಖೆಗಳ ಸಭೆ

ಕರೆದು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.  

ಅಲ್ಲದೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ

ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಸಹ ಸಿಎಂ ಹೇಳಿದ್ದಾರೆ.

ಯಾವುದೇ ಪ್ರದೇಶದಲ್ಲಿ ಕಡಿಮೆ ಮಳೆ ಬಿದ್ದರೂ ಅಲ್ಲಿ ಸಿರಿಧಾನ್ಯಗಳನ್ನು ಬೆಳೆಯಲು ಅನುಕೂಲ ಆಗಲಿದೆ.

ಈ ರೀತಿಯ ವಾತಾವರಣದಲ್ಲಿಯೂ ಹೊಂದಿಕೊಂಡು ಬೆಳೆಯುವ ಗುಣವನ್ನು ಸಿರಿಧಾನ್ಯಗಳು ಹೊಂದಿವೆ.

ಇದರೊಂದಿಗೆ  ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ.

 ಈ ಉದ್ದೇಶದಿಂದಲೇ ರಾಜ್ಯ ಸರ್ಕಾರವು ನಿರಂತರವಾಗಿ ಸಿರಿಧಾನ್ಯ ಮೇಳವನ್ನು ಆಯೋಜಿಸುತ್ತಿದೆ ಎಂದು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇನ್ನು ಸಿರಿಧಾನ್ಯಗಳಲ್ಲಿ ಲವಣ, ವಿಟಮಿನ್ ಹಾಗೂ ನಾರಿನ ಅಂಶಗಳು ಸಹ ಹೇರಳವಾಗಿದೆ.

ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹಲವು ಕಾಯಿಲೆಗಳಿಗೆ ರಾಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ

ಸಹ ಒಂದು ಕಾರಣವಾಗಿದೆ ಎಂದು ಅಧ್ಯಯನಗಳ ವರದಿ ಉಲ್ಲೇಖಿ  ಹೇಳುತ್ತಿವೆ.

ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗಬಲ್ಲದು ಎಂದು ಅವರು ಹೇಳಿದರು.

2004ರಲ್ಲಿ ಸಾವಯವ ಕೃಷಿ ನೀತಿ, 2014ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ.

ಪೂರಕ ವಾತಾವರಣ ನಿರ್ಮಿಸುವ ಮೂಲಕ ರಾಜ್ಯ ಸರ್ಕಾರವು ಸಾವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು

ಸರ್ಕಾರ ನಿರಂತರವಾಗಿ ಉತ್ತೇಜನ ಕೊಡುತ್ತಿದೆ. ಈ ಕ್ರಮಗಳನ್ನು ಅನುಸರಿಸುವುದರೊಂದಿಗೆ ಜನರ

ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

North India ಉತ್ತರ ಭಾರತದಲ್ಲಿ ಎರಡು ದಿನ ಶೀತಗಾಳಿ

ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಹಾಗೂ ಜನ ಮನ್ನಣೆಯನ್ನು ಗಳಿಸುತ್ತಿದೆ.

ಇನ್ನು  ಭಾರತವು ಕೃಷಿ ಪ್ರಧಾನ ದೇಶವಾಗಿರುವುದರಿಂದ ಆಹಾರ ಸ್ವಾವಲಂಬನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ

ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದಿದ್ದಾರೆ

ಸಿ.ಎಂ ಸಿದ್ದರಾಮಯ್ಯ ಅವರು.         

ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

ಸಿರಿಧಾನ್ಯಗಳ ಉತ್ಪಾದನೆ ಹಾಗೂ ಮಾರಾಟವನ್ನು ಹೆಚ್ಚಳ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಬೆಂಗಳೂರಿನ ಅರಮನೆ

ಮೈದಾನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಸವಾಯವ ಹಾಗೂ ಸಿರಿಧಾನ್ಯ ಮೇಳಕ್ಕೆ ರಾಜ್ಯದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನು  ಮುಖ್ಯಮಂತ್ರಿ Siddaramaiah ಅವರು ಅರಮನೆ ಮೈದಾನದಲ್ಲಿ ಆಯೋಜಿಸಿರುವ "ಸಿರಿಧಾನ್ಯ ಮತ್ತು ಸಾವಯವ

ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024" ಮತ್ತು "ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ"ಗಳನ್ನು ಉದ್ಘಾಟಿಸಿದರು.

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ

ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ

ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ,

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್,

ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.  

Published On: 07 January 2024, 04:19 PM English Summary: The move to encourage millets crops: CM Siddaramaiah

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.