News

ಕರ್ನಾಟಕದ ವಿರೋಧ ಪಕ್ಷದ ನಾಯಕ ಯಾರು ಎನ್ನುವುದಕ್ಕೆ ಉತ್ತರವೇ ಇಲ್ಲ!

13 July, 2023 2:43 PM IST By: Hitesh
There is no answer to who is the leader of the opposition party in Karnataka!

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಇಂದಿಗೆ ಬರೋಬ್ಬರಿ ಎರಡು ತಿಂಗಳು ಕಳೆದರೂ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ.

ಇಂದಿಗೆ ಕರ್ನಾಟಕ ಚುನಾವಣೆ ಫಲಿತಾಂಶ ಪ್ರಕಟವಾಗಿ ಬರೋಬ್ಬರಿ ಎರಡು ತಿಂಗಳುಗಳೇ ಕಳೆದಿದೆ.

ಮೇ 13ಕ್ಕೆ ಕರ್ನಾಟಕ ವಿಧಾನಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿ 135 ಸ್ಥಾನಗಳ ಅಭೂತಪೂರ್ವ ಯಶಸ್ಸನ್ನು ಸಾಧಿಸಿದೆ.

ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಇದಾದ ನಂತರದಲ್ಲಿ ಕರ್ನಾಟಕದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲ ರಚನೆಯೂ ಆಗಿದೆ.

ಅಲ್ಲದೇ ಕರ್ನಾಟಕದ 2023-24ನೇ ಸಾಲಿನ ಬಜೆಟ್‌ ಹಾಗೂ ವಿಧಾನಸಭೆ ಅಧಿವೇಶನವೂ ಪ್ರಾರಂಭವಾಗಿದೆ.

ವಿಧಾನಸಭೆ ಅಧಿವೇಶನ ಪ್ರಾರಂಭವಾಗಿ ಈಗಾಗಲೇ ಎರಡು ವಾರಗಳು ಮುಕ್ತಾಯವಾಗುತ್ತಿದ್ದು,

ಮೂರನೇ ವಾರಕ್ಕೆ ವಿಧಾನಸಭೆ ಅಧಿವೇಶನ ಹೋಗುತ್ತಿದೆ. ಇಷ್ಟೆಲ್ಲ ಬೆಳವಣಿಗೆಯಾದರೂ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆಯಾಗಿಲ್ಲ.  

ಕಾಂಗ್ರೆಸ್‌ಗೆ ವರದಾನವಾಯ್ತು!

ಈಗಾಗಲೇ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸನ್ನು ಸಾಧಿಸಿರುವ ಕಾಂಗ್ರೆಸ್‌ಗೆ ಈ ಬೆಳವಣಿಗೆ ಪರೋಕ್ಷವಾಗಿ ಸಹಾಯವೇ ಆಗಿದೆ.

ಕಾಂಗ್ರೆಸ್‌ ಸರ್ಕಾರ ಟೇಕ್‌ಆಫ್‌ ಆಗಲು ಬೇಕಾದ ಎಲ್ಲ ತಯಾರಿಗಳನ್ನು ಮಾಡಿಕೊಳ್ಳಲು ಇದು ಅವಕಾಶ ಕಲ್ಪಿಸಿತು.

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿ

ಮಾಡುತ್ತಿದೆಯಾದರೂ ಇದರ ಅನುಷ್ಠಾನದ ವಿಚಾರದಲ್ಲಿ ಸರ್ಕಾರ ಎಡವಿದೆ. 

ಈ ಯೋಜನೆಗಳನ್ನು ಜಾರಿ ಮಾಡುವ ಪ್ರಾರಂಭದ ಹಂತದಲ್ಲಿ ಹಲವು ಕಾಂಗ್ರೆಸ್‌ನ ನಾಯಕರು ಗೊಂದಲದ ಹೇಳಿಕೆಗಳನ್ನು ನೀಡಿದ್ದರು.

ಅಲ್ಲದೇ ಯೋಜನೆಗಳನ್ನು ಅನುಷ್ಠಾನದಲ್ಲೂ ಹಲವು ಯಡವಟ್ಟುಗಳು ಆಗಿದ್ದವು.

ಕಾಂಗ್ರೆಸ್‌ನಿಂದ ನಿರಂತರ ಟ್ರೋಲ್‌!

ಬಿಜೆಪಿ ವಿರೋಧ ಪಕ್ಷದ ನಾಯಕನ್ನು ಆಯ್ಕೆ ಮಾಡದೆ ಇರುವುದರಿಂದ ಕಾಂಗ್ರೆಸ್‌ ಈ ವಿಷಯವನ್ನು ನಿರಂತರವಾಗಿ ಟ್ರೋಲ್‌ ಮಾಡಿತು.

ಅಲ್ಲದೇ ನಿಮಗೆ ಒಬ್ಬ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಿಲ್ಲವೇ ಎಂದು ಪ್ರಶ್ನೆ ಮಾಡಿ ಟ್ರೋಲ್‌ ಮಾಡಿತ್ತು.

ನಮ್ಮ ಪ್ರಕಟಣೆಗೆ ಇನ್ನೂ ಸ್ಪಂದನೆ ಸಿಕ್ಕಿಲ್ಲ, dear BJP Karnataka ನಿಮ್ಮ ಹೈಕಮಾಂಡ್ ವರಿಷ್ಠರಿಗೆ ಇನ್ನೂ ಸೂಕ್ತ ಸಂದರ್ಭ,

ಸೂಕ್ತ ಸಮಯ, ಸೂಕ್ತ ಮುಹೂರ್ತ ಕೂಡಿ ಬಂದಿಲ್ಲವೇ?

ಹೀನಾಯ ಸೋಲಿನ ಬಳಿಕ ಕರ್ನಾಟಕ ಬಿಜೆಪಿಯನ್ನು ದೆಹಲಿಯ ನಾಯಕರು ಕಾಲ ಕೆಳಗಿನ ಕಸದಂತೆ ಕಾಣುತ್ತಿದ್ದಾರೆಯೇ?

ಅಥವಾ ಆಂತರಿಕ ಕಲಹ ಇನ್ನೂ ಮುಗಿದಿಲ್ಲವೇ? ಎಂದು ಪ್ರಶ್ನೆ ಮಾಡಿತ್ತು.

ಪ್ರಕಟಣೆ; ತುರ್ತಾಗಿ ಬೇಕಾಗಿದ್ದಾರೆ ಎಂದು ವ್ಯಂಗ್ಯ!

ಖಾಲಿ ಇರುವ ಕರ್ನಾಟಕದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹುದ್ದೆಗೆ ಸೂಕ್ತ ವ್ಯಕ್ತಿ ಬೇಕಾಗಿದ್ದಾರೆ ಎಂದು ಬಿಜೆಪಿ ಟ್ರೋಲ್‌ ಮಾಡಿತ್ತು.

ಅಹರ್ತೆ: ವಾಟ್ಸಪ್‌ ಯೂನಿವರ್ಸಿಟಿ ಪದವಿ ಪಡೆದಿರಬಾರದು. ಸಂವಿಧಾನ ಹಾಗೂ ಪ್ರಜಾಪ್ರಭುತ್ವಗಳ ಮೌಲ್ಯ ತಿಳಿದಿರಬೇಕು ಸುಳ್ಳು ಹೇಳಬಾರದು.

ಭ್ರಷ್ಟಾಚಾರ ಮಾಡಿರಬಾರದು ಎಂದು ಹೇಳಿ ಪ್ರಕಟಣೆ ರೀತಿಯ ಪೋಸ್ಟರ್‌ಗಳನ್ನು ಮಾಡಿ ಪ್ರಚಾರ ಮಾಡಿತ್ತು.

ಕಾಂಗ್ರೆಸ್‌ನಿಂದ ಪ್ರಶ್ನೆಗಳ ಸುರಿಮಳೆ

ಚುನಾವಣೆ ಫಲಿತಾಂಶ ಬಂದು 2 ತಿಂಗಳಾಯ್ತು, ಅಧಿವೇಶನವೂ ಪ್ರಾರಂಭ ಆಯ್ತು, ಆದರೆ ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ?

ನಾವಿಕನಿಲ್ಲದ ನೌಕೆ, ನಾಯಕನಿಲ್ಲದ ಬಿಜೆಪಿ ಎರಡೂ ಮುಳುಗುವುದು ನಿಶ್ಚಿತ!

ಹಿಂದೆ BS Yediyurappa ಅವರು ಸಂಪುಟ ರಚನೆಗೆ ತಿಂಗಳುಗಟ್ಟಲೆ ಹೈಕಮಾಂಡ್ ಬಾಗಿಲು ಕಾದಿದ್ದರು,

ನಂತರ Basavaraj Bommai ಅವರು ಸಂಪುಟ ವಿಸ್ತರಣೆಗೆ 15ಕ್ಕೂ ಹೆಚ್ಚು ಬಾರಿ ದೆಹಲಿ ದಂಡಯಾತ್ರೆ ಮಾಡಿದ್ದರು,

ಆದರೂ ಸಂಪುಟ ವಿಸ್ತರಣೆಯಾಗಲಿಲ್ಲ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

There is no answer to who is the leader of the opposition party in Karnataka!

ಈಗ ವಿಪಕ್ಷ ನಾಯಕನ ಆಯ್ಕೆಗೆ ಸತಾಯಿಸುತ್ತಿದ್ದಾರೆ. ಬಿಜೆಪಿ ಹೈಕಮಾಂಡಿಗೆ ಕರ್ನಾಟಕವನ್ನಷ್ಟೇ ಅಲ್ಲ, ಕರ್ನಾಟಕದ ಬಿಜೆಪಿಯನ್ನು

ಕಂಡರೂ ತಾತ್ಸಾರವೇ? ಎಂದು ಪ್ರಶ್ನೆ ಮಾಡಿದೆ. 

ವಿರೋಧ ಪಕ್ಷದ ಬಿಜೆಪಿ ನಾಯಕ; ಆಕಾಂಕ್ಷಿಗಳು ಯಾರು

ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನಾಗಲು ಬಸನಗೌಡ ಪಾಟೀಲ ಯತ್ನಾಳ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,

ಅಶ್ವಥನಾರಾಯಣ, ಆರ್‌. ಅಶೋಕ್‌ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದಾರೆ.

ಇನ್ನು ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆಯೂ ಇರುವುದರಿಂದ ಪಕ್ಷವನ್ನು ತಳಮಟ್ಟದಿಂದ

ಸಂಘಟಿಸುವ ಜವಾಬ್ದಾರಿ ವಿರೋಧ ಪಕ್ಷದ ನಾಯಕನ ಮೇಲಿದೆ. 

ಬಿಜೆಪಿಗೂ ತೀವ್ರ ಮುಜುಗರ

ಸಕಾಲದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಯಾಗದೆ ಇರುವುದು ಬಿಜೆಪಿಗೂ ತೀವ್ರವಾದ ಮುಜುಗರವನ್ನು ಉಂಟು ಮಾಡಿದೆ.

ಕರ್ನಾಟಕದ ಇತಿಹಾಸದಲ್ಲಿ ಇಲ್ಲಿಯವರೆಗೆ ವಿರೋಧ ಪಕ್ಷದ ನಾಯಕನಿಲ್ಲದೆ ವಿಧಾನಸಭೆ ಅಧಿವೇಶನವೇ ನಡೆದಿಲ್ಲ ಎನ್ನಲಾಗಿದ್ದು,

ಈ ಬೆಳವಣಿಗೆ ಬಿಜೆಪಿಗೆ ಇರುಸುಮುರುಸು ಉಂಟು ಮಾಡಿದ್ದರೆ, ಬಿಜೆಪಿಯ ಕಾರ್ಯಕರ್ತರನ್ನೂ ಮುಜುಗರಕ್ಕೆ ದೂಡಿದೆ.  

ಚಿತ್ರಕೃಪೆ: www.facebook.com/INCKarnataka