ರಾಜ್ಯ ಕೃಷಿ ಬೆಲೆ ಆಯೋಗಕ್ಕೆ (ಕೆಎಪಿಸಿ) ಅಧ್ಯಕ್ಷರ ನೇಮಕವಾಗದೆ ಇರುವುದು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ.
ಇದನ್ನೂ ಓದಿರಿ: ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸುಧಾಕರ್ ರಾವ್ ನೇತೃತ್ವದಲ್ಲಿ ಏಳನೇ ವೇತನ ಆಯೋಗ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೃಷಿ ಬೆಲೆ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡದೆ ಇರುವುದರಿಂದ ರೈತರ ಹಲವು ಸೌಲಭ್ಯಗಳು ರೈತರನ್ನು ಮುಟ್ಟುತ್ತಿಲ್ಲ. ಇದು ಹಲವು ಸಮಸ್ಯೆಗಳಿಗೆ ನಾಂದಿ ಆಗಿದೆ.
ಪ್ರಸಕ್ತ ವರ್ಷದ ಜುಲೈನಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಕೃಷಿ ಬೆಲೆ ಆಯೋಗ ಸೇರಿದಂತೆ ವಿವಿಧ ಆಯೋಗಗಳ ಅಧ್ಯಕ್ಷರ ಹುದ್ದೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
ಈ ಆಯೋಗದ ಅಧ್ಯಕ್ಷರು ಸರ್ಕಾರ ಮತ್ತು ರೈತರ ನಡುವೆ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಾರೆ. ಇದು ಸಂವಹನ ಸಮಸ್ಯೆ ಪರಿಹಾರಕ್ಕೆ ಅವಕಾಶ ಕಲ್ಪಿಸುತ್ತದೆ.
ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
2014ರಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗವನ್ನು ರಚನೆ ಮಾಡಲಾಗಿತ್ತು. ಈ ಆಯೋಗದ ಮುಖ್ಯಸ್ಥರು ಬೆಳೆ ಉತ್ಪಾದನೆ, ಸಾಗುವಳಿ ವೆಚ್ಚ, ಸಾಗಣೆ ಮತ್ತು ಬೆಳೆ ವಿಮೆ ಸೇರಿದಂತೆ ಹಲವು
ವಿಷಯಗಳ ಬಗ್ಗೆ ಕಾಲಮಿತಿಯಲ್ಲಿ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಹಾಗೂ ಸಲಹೆಗಳನ್ನು ನೀಡುತ್ತದೆ.
ಹನುಮನಗೌಡ ಬೆಳಗುರ್ಕಿ ನೇತೃತ್ವದ ಆಯೋಗವು ಕಳೆದ ವರ್ಷ ಕೊರೊನಾ ಸೋಂಕಿನ ನಂತರದಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (NDRF)
ಅಡಿಯಲ್ಲಿ ಬೆಳೆ ನಷ್ಟ ಪರಿಹಾರವನ್ನು ಹೆಚ್ಚಿಸಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರವನ್ನು ಕೋರಿತ್ತು.
ರಾಜ್ಯದ ರೈತರಿಗೆ ಸಿಹಿಸುದ್ದಿ: ಪ್ರಮುಖ ಜಲಾಶಯಗಳು ಭರ್ತಿ!
ಪ್ರಸಕ್ತ ವರ್ಷದ ಜುಲೈನಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಕೃಷಿ ಬೆಲೆ ಆಯೋಗ ಸೇರಿದಂತೆ ವಿವಿಧ ಆಯೋಗಗಳ ಅಧ್ಯಕ್ಷರ ಹುದ್ದೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
ಆಯೋಗದ ಅಧ್ಯಕ್ಷರ ಹುದ್ದೆ ರದ್ದು ಮಾಡಿದ ನಂತರ ಆಯೋಗ ಸಕ್ರಿಯವಾಗಿಲ್ಲ.
ಕರ್ನಾಟಕದಲ್ಲಿ 27 ಪ್ರಮುಖ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಅವುಗಳ ಸಾಗುವಳಿ ವೆಚ್ಚದ ವರದಿಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಎಂಎಸ್ಪಿ ನಿಗದಿಪಡಿಸಲು ಕಳುಹಿಸುವುದು ಆಯೋಗದ ಪ್ರಮುಖ ಜವಾಬ್ದಾರಿಗಳಲ್ಲಿ ಒಂದಾಗಿದೆ.
ಆದರೆ, ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡದೆ ಇರುವುದು ಹಲವು ಸಮಸ್ಯೆಗಳಿಗೆ ಎಡೆಮಾಡಿಕೊಟ್ಟಿದೆ.
ಕೇಂದ್ರ ಸರ್ಕಾರವು ವರದಿಯನ್ನು ಸಲ್ಲಿಸದಿದ್ದರೂ ಸಹ, MSP ನಿಗದಿಪಡಿಸುತ್ತದೆ. ವರದಿ ಕಳುಹಿಸಲು ನಾವು ಈಗಾಗಲೇ ಮೂರು ತಿಂಗಳು ತಡವಾಗಿದೆ,
ಹೀಗಾಗಿ ನಮ್ಮ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೆಸರು ಹೇಳಲು ಇಚ್ಛಿಸದ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೃಷಿ ವೆಚ್ಚದ ಸಮೀಕ್ಷೆಯು ಬೀಜಗಳು, ಗೊಬ್ಬರಗಳಿಗೆ ರೈತರು ಎಷ್ಟು ಖರ್ಚು ಮಾಡಿದ್ದಾರೆ ಎನ್ನುವುದಕ್ಕೆ ಸಂಬಂಧಿಸಿದಂತೆ ನಿಖರವಾದ ವರದಿಯನ್ನು ಕಾಲಾನು ಕಾಲಕ್ಕೆ ನೀಡುತ್ತದೆ.
ಈ ವರದಿಯ ಆಧಾರದ ಮೇಲೆ ಬೆಲೆಯನ್ನು ಶಿಫಾರಸು ಮಾಡಲಾಗುತ್ತದೆ.
ಕೆಲ ತಿಂಗಳ ಹಿಂದೆ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಪ್ರಕಾರ ಮಳೆಯಾಶ್ರಿತ, ನೀರಾವರಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಹೆಕ್ಟೇರ್‌ಗೆ ಈಗಿರುವ 6,800 ರೂ., 13,500 ಹಾಗೂ 18,000 ರೂ. ಬೆಲೆ ಸಮರ್ಪಕವಾಗಿಲ್ಲ.
ಕೃಷಿ ಬೆಳೆಗಳಿಗೆ ಹೆಕ್ಟೇರ್‌ಗೆ ಕನಿಷ್ಠ 50 ಸಾವಿರ ಮತ್ತು ಬಹುವಾರ್ಷಿಕ ಬೆಳೆಗಳಿಗೆ 1 ಲಕ್ಷ ರೂ. ನೀಡಬೇಕು ಎಂದು ಒತ್ತಾಯ ಮಾಡಲಾಗಿತ್ತು.