1. ಸುದ್ದಿಗಳು

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ರಸಗೊಬ್ಬರದ ಕೊರತೆಯಿಲ್ಲ: ಸದಾನಂದ ಗೌಡ

agriculture

ದೇಶದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಯೂರಿಯಾದ ಅವಶ್ಯಕತೆಯಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಗೆ ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಿದೆ.  ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ ಎಂದು ಹೇಳಿದರು.

ರಸಗೊಬ್ಬರ ಸಚಿವಾಲಯ ನಿರಂತರವಾಗಿ ರಸಗೊಬ್ಬರ ಲಭ್ಯತೆಯ ಬಗ್ಗೆ ತೀವ್ರ ನಿಗಾ ಇರಿಸಿದೆ ಮತ್ತು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಯೂರಿಯಾ ಪೂರೈಕೆಗೆ ಬೇಡಿಕೆ ಎದುರಾದರೆ ಅದನ್ನು ಪೂರೈಸಲು ಬದ್ಧವಿದೆ ಎಂದರು. ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರೈತರಿಗೆ ಸಕಾಲದಲ್ಲಿ ಕೈಗೆಟಕುವ ದರದಲ್ಲಿ ಸೂಕ್ತ ಪ್ರಮಾಣದ ರಸಗೊಬ್ಬರ ಪೂರೈಕೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ ಎಂದರು.

ಲಾಕ್ಡೌನ್ ಅವಧಿಯಲ್ಲಿ ರಸಗೂಬ್ಬರ ಮಾರಾಟ ಶೇ. 83 ರಷ್ಟು ಹೆಚ್ಚಾಗಿದೆ. ಇದು ಕೃಷಿ ಕ್ಷೇತ್ರದಲ್ಲಿ ದಾಖಲೆಯ ಬೆಳವಣಿಗೆಯಾಗಿದೆ.  ಮೇ ಮತ್ತು ಜೂನ್ ಅವಧಿಯಲ್ಲಿ ದೇಶಾದ್ಯಂತ ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಡಿಬಿಟಿ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಏಪ್ರೀಲ್-ಜೂನ್ ತಿಂಗಳ ನಡುವಿನ ಅವಧಿಯಲ್ಲಿ ಒಟ್ಟು 111.61 ಲಕ್ಷ ಟನ್ ರಸಗೊಬ್ಬರವನ್ನು ರೈತರಿಗೆ ಮಾರಾಟ ಮಾಡಲಾಗಿದೆ. ಕಳದ ವರ್ಷ ಇದೇ ಅವಧಿಯಲ್ಲಿ 61.05 ಲಕ್ಷ ಟನ್ ರಸಗೊಬ್ಬರ ಮಾರಾಟ ಮಾಡಲಾಗಿತ್ತು.  ಹೆಚ್ಚುವರಿಯಾಗಿ ರಸಗೊಬ್ಬರಕ್ಕೆ ಯಾವುದೇ ಬೇಡಿಕೆ ಎದುರಾದರೂ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಜೊತೆ  ಸಮಾಲೋಚಿಸಿ, ದೇಶೀಯ ಉತ್ಪಾದನೆ ಹೆಚ್ಚಳ ಮತ್ತು ಆಮದು ಮೂಲಕ ಪೂರೈಕೆ ಮಾಡಲಾಗುವುದು ಎಂದು ಸಚಿವ ಸದಾನಂದ ಗೌಡ ಹೇಳಿದರು.

Published On: 07 July 2020, 12:09 PM English Summary: there is no shortage of fertilizer nationwide in the current monsoon

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.