News

Rain ಇನ್ನೂ ಎರಡು ದಿನ ಇರಲಿದೆ ಮಳೆಯ ಅಬ್ಬರ!

29 July, 2023 10:59 AM IST By: Hitesh
There will be two more days of rain!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇಳಿಕೆಯಾಗಿದ್ದು, ಕರಾವಳಿ ಭಾಗದಲ್ಲಿ ಮಳೆಯ ಮುಂದುವರಿದಿದೆ.

ಶುಕ್ರವಾರ ನೈರುತ್ಯ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.

ಆದರೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು.

ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ

ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಬರೋಬ್ಬರಿ 20 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಶನಿವಾರ ಹಾಗೂ ಭಾನುವಾರ ಕರಾವಳಿಯ ಬಹುತೇಕ ಕಡೆಗಳಲ್ಲಿ

ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ

ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಿರುಗಾಳಿ ಮುನ್ನೆಚ್ಚರಿಕೆ

ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40ರಿಂದ 45 ಕಿ.ಮೀನಿಂದ 55 ಕಿ.ಮೀ

ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ

ಬೆಂಗಳೂರು ನಗರ ಹಾಗೂ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಯ ಅವಧಿಯು ಸಾಮಾನ್ಯವಾಗಿ

ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 28 ಮತ್ತು ಕನಿಷ್ಠ

ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೇ ಉತ್ತರ ಕನ್ನಡದ ಕ್ಯಾಸಲ್‌ ರಾಕ್‌ನಲ್ಲಿ 6 ಸೆಂ.ಮೀ, ಔರಾದ್‌, ಮಾಣಿ, ಕದ್ರಾ, ಗೇರುಸೊಪ್ಪ, ಮಂಕಿ, ಲಿಂಗನಮಕ್ಕಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.

ಕೋಟಾ, ಉಡುಪಿ, ಸಿದ್ದಾಪುರ, ಕೊಲ್ಲೂರು, ಕುಂದಾಪುರ, ಕಾರ್ಕಳ, ಉಪ್ಪಿನಂಗಡಿ, ಪಣಂಬೂರು,

ಪುತ್ತೂರು, ಮಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಶಿರಾಲಿ, ಅಂಕೋಲಾ, ಸಿದ್ದಾಪುರ, ಕುಮಟಾ,

ಬೀದರ್‌ ಪಿಟಿಓ, ಸಂತಾಪುರ, ಮಂಠಾಳ, ಲೋಂಡಾ, ನಿಪ್ಪಾಣಿ, ಕಲಬುರಗಿ, ನಿಪ್ಪಾಣಿ, ಸೇಡಂ,

ಚಿತ್ತೂಪುರ, ಖಜೂರಿ, ಮುಧೋಳ ಸೇರಿದಂತೆ ಹಲವು ಪ್ರದೇಶಗಳಲ್ಲಿ

ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.