News

ಕುರಿಗಾಹಿಗೆ ಕೊರೋನಾ -ಕುರಿಗಳಿಗೂ ಕ್ವಾರಂಟೈನ್

30 June, 2020 10:08 AM IST By:

ತುಮಕೂರ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿ ಕುರಿಗಾಹಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದರಿಂದ ಅವರು ಕಾಯುತ್ತಿದ್ದ 43 ಮೇಕೆಗಳನ್ನು ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. ಈ ಮೇಕೆಗಳಿಗೂ . ಕುರಿಗಳ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆಗಾಗಿ ಭೂಪಾಲ್ ‌ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ ಮರುದಿನವೇ ಅವರ ಸಂಬಂಧಿಕರು 43 ಮೇಕೆಗಳನ್ನು ಜಕ್ಕನಹಳ್ಳಿಗೆ ಕೊಂಡೊಯ್ದಿದ್ದಾರೆ. ಅಲ್ಲಿ ಅವುಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.

ಇಲ್ಲಿಯವರಿಗೆ ಮೇಕೆ, ಕುರಿಗಳಿಗೆ ಸೋಂಕು ತಗುಲುತ್ತದೆ ಎಂಬ ಮಾಹಿತಿ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಕುರಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ವರದಿ ಬರುವವರೆಗೆ ಈ ಕುರಿಗಳನ್ನು ಒಂದೆಡೆ ಕೂಡಿ ಹಾಕಿ ನಿಗಾವಹಿಸಲಾಗುವುದು ಎಂದು ಚಿಕ್ಕನಾಯಕನಹಳ್ಳಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ ಕುರಿಗಳ ಸ್ವ್ಯಾಬ್ ಸ್ಯಾಂಪಲ್​​ಗಳ ವರದಿ ಬಂದ ನಂತರವೇ ಕುರಿಗಳನ್ನು ಮೇಯಲು ಗುಂಪಿನಲ್ಲಿ ಬಿಡಬೇಕೇ, ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.