ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೈಲ್ಮೈ ಸುಳಿಗಾಳಿ ಪರಿಣಾಮವಾಗಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಇದೇ ತಿಂಗಳ ಮೇ 5,6 ಮತ್ತು 7 ರಂದು ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರ, ಶಿವಮೊಗ್ಗ, ಕೊಡಗು ಹಾಗೂ ಹಾಸನದಲ್ಲಿ ಮೇ 5 ರಿಂದ 7ರವರೆಗೆ ಮಳೆಯಾಗಲಿದೆ. ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ.
ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ ಜಿಲ್ಲೆಯಲ್ಲಿ ಮೇ. 3 ರಂದು ಮೋಡ ಕದವಿ ವಾತಾವರಣವಿದೆ. ಸಾಯಂಕಾಲ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.
ಕಳೆದ ಎರಡು ದಿನಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಜೇವರ್ಗಿ ಹಾಗೂ ಅಫಜಲ್ಪುರದಲ್ಲಿ ತಲಾ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಳಗಿ ತಾಲೂಕಿನಲ್ಲಿ ಎರಡು ಎತ್ತುಗಳು ಸಿಡಿಲಿಗೆ ಮೃತಪಟ್ಟಿವೆ.
ಕಲಬುರಗಿ ಜಿಲ್ಲೆಯಲ್ಲಿ ಸೋಮವಾರ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಸಾಯಂಕಾಲ ಮತ್ತು ರಾತ್ರಿ ಆಗಾಗ ಚದುರಿದ ಮಳೆಯಾಗಿದೆ.
Share your comments