ರಾಜ್ಯದಲ್ಲಿ ಈಗಾಗಲೇ ಮುಂಗಾರು ಚುರುಕುಗೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 12ರಿಂದ ಒಂದು ವಾರಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಹೆಚ್ಚಾಗಲಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿಯೂ ಮಳೆಯಾಗಲಿದೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, , ಬೆಂಗಳೂರು, ಕೊಡಗು, ಮೈಸೂರು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಳೆ ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ, ಬೆಂಗಳೂರು ನಗರ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜೂನ್ 15 ರವರೆಗೆ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 3 ದಿನ ಗುಡುಗು ಸಿಡಿಲು ಸಹಿತ ಮಳೆ ಬೀಳಲಿದೆ. ಆ ನಂತರವೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಮಹಾರಾಷ್ಟ್ರ ಭಾಗದಲ್ಲೂ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕ, ಛತ್ತೀಸ್‌ಘಡ, ಕೇರಳ, ಮಾಹೆ, ಗೋವಾ, ಅಂಡಮಾನ್ ನಿಕೋಬಾರ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ.
ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿರುವುದರಿಂದ ಮುಂದಿನ 1 ವಾರಗಳ ಕಾಲ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.