ರಾಜ್ಯದಲ್ಲಿ ಹವಾಮಾನದಲ್ಲಿ ಗರಿಷ್ಠ ತಾಪಮಾನ ಅಲ್ಲಲ್ಲಿ ಹೆಚ್ಚಳವಾಗಿದೆ.
ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಅತ್ಯಂತ ಗಮನಾರ್ಹವಾಗಿ 4.1 ಡಿಗ್ರಿ ಸೆಲ್ಸಿಯಸ್
ಅಥವಾ ಅದಕ್ಕಿಂತ ಕಡಿಮೆ ತಾಪಮಾನ ದಾಖಲಾಗಿರುವುದು ವರದಿ ಆಗಿದೆ.
ಇನ್ನು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ 2.1 ಡಿಗ್ರಿ ಸೆಲ್ಸಿಯಸ್ ನಿಂದ 4.0 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
Gold Rate Today ಚಿನ್ನದ ಬೆಲೆಯಲ್ಲಿ ಮತ್ತೆ ಹೆಚ್ಚಳ!
ರಾಜ್ಯದ ವಿವಿಧೆಡೆ ಗರಿಷ್ಠ ಉಷ್ಣಾಂಶದಲ್ಲಿ ಏರಿಳಿತ ಹೆಚ್ಚಾಗುವ ಸಾಧ್ಯತೆ ಇದ್ದು, ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ: ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಕನಿಷ್ಠ ಉಷ್ಣಾಂಶ: ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹಾಗೂ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Bank 5 ದಿನ ಮಾತ್ರ ಇನ್ಮುಂದೆ ಬ್ಯಾಂಕ್ ಉದ್ಯೋಗಿಗಳಿಗೆ ಕೆಲಸ ?
ರಾಜ್ಯದಾದ್ಯಂತ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಆಗಿಲ್ಲ.
ಬಹುತೇಕ ಪ್ರದೇಶದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯಾವುದೇ ಮುನ್ಸೂಚನೆಯನ್ನು ನೀಡಿಲ್ಲ.
ಇನ್ನು ಮುಂದಿನ 24 ಗಂಟೆಗಳ ಕಾಲ ನಾಡಿನಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಗರಿಷ್ಠ ಉಷ್ಣಾಂಶ 36.2 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದ್ದರೆ,
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.6 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿರುವುದು ವರದಿ ಆಗಿದೆ.
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿವೆ.
ಬದಲಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್
ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.