ರಾಜ್ಯದ ವಿವಿಧೆಡೆ ಸಾಧಾರಣ ಮಳೆ ಮುಂದುವರಿದ್ದು, ಬಿಸಿಲಿನ ಝಳವೂ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು.
ಸೆಂ.ಮೀ ಪ್ರಮಾಣದಲ್ಲಿ ಮಳೆ ಆಗಿರುವುದು ವರದಿ ಆಗಿಲ್ಲ.
ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶವು 38.5 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಗಳು ಕರಾವಳಿಯ ದಕ್ಷಿಣ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ,
ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳು: ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳ ಒಂದೆರಡು ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ
ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಗುಡುಗು ಮುನ್ನೆಚ್ಚರಿಕೆ: ಯಾವುದೇ ಗಮನಾರ್ಹ ಬದಲಾವಣೆಗಳು ವರದಿ ಆಗಿಲ್ಲ.
ಮುಂದಿನ 24 ಗಂಟೆ: ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉಳಿದಂತೆ ರಾಜ್ಯದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ವರದಿ ಆಗಿಲ್ಲ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶ
ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶವು 35 ಮತ್ತು ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶವು 35 ಮತ್ತು ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕೊಲ್ಕತ್ತಾ ಮೆಟ್ರೋದಿಂದ ಹೊಸ ದಾಖಲೆ: ನದಿ ಮಾರ್ಗದಲ್ಲಿ ಮೆಟ್ರೋ!