ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಅಪಘಾತಕ್ಕಿಡಾಗಿ ಮೃತಪಟ್ಟ ಕುಂಟುಂಬದವರಿಗೆ, ನೀಡಲಾಗುತ್ತಿದ್ದ ಪರಿಹಾರ ಮೊತ್ತದಲ್ಲಿ ಹೆಚ್ಚಳ ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ₹ 49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ.
₹ 50ರಿಂದ ₹ 100ರ ವರೆಗಿನ ಮುಖ ಬೆಲೆ ಟಿಕೆಟ್‌ಗೆ ₹ 1 ಹಾಗೂ ₹ 100ಕ್ಕಿಂತ ಹೆಚ್ಚು ಮುಖ ಬೆಲೆ ಟಿಕೆಟ್‌ಗೆ ₹2 ಅಪಘಾತ ಪರಿಹಾರ ನಿಧಿ ವಂತಿಕೆಯಾಗಿ ಸಂಗ್ರಹಿಸಲಾಗುತ್ತದೆ.
ರಾಜ್ಯಗಳಿಗೆ ಕಲ್ಲಿದ್ದಲು ಪೂರೈಸಲು ಅಗತ್ಯ ಕ್ರಮ
ದೇಶೀಯವಾಗಿ ಬಳಕೆ ಮಾಡುವ ಕಲ್ಲಿದ್ದನ್ನು ಕಾಲ ಕಾಲಕ್ಕೆ ರಾಜ್ಯಗಳಿಗೆ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೇಂದ್ರ ಕಲ್ಲಿದ್ದಲು ಗಣಿ ಸಚಿವ ಪ್ರಲ್ಹಾದ್ ಜೋಶಿ ಸೂಚನೆ ನೀಡಿದರು. ಈ ಕುರಿತು ತಿಳಿಸಿದ ಅವರು, ೨೦೪೭ರ ಅಮೃತ ಕಾಲದಲ್ಲಿ ಗಣಿ ವಲಯ ಸಂಪೂರ್ಣವಾಗಿ ಅಧುನೀಕರಣ ಹಾಗೂ ಗುಣಮಟ್ಟದ ಕಲ್ಲಿದ್ದಲು ಉತ್ಪಾದನೆಗೆ ಒತ್ತು ನೀಡಬೇಕು. ಅಭಿವೃದ್ಧಿ ಪಥ ವೇಗದಲ್ಲಿ ಸಾಗಲು ನೂತನ ತಂತ್ರಜ್ಞಾನ ಅಳವಡಿಸಿಕೊಂಡು ಸಕಾಲಕ್ಕೆ ಕಲ್ಲಿದ್ದಲು ಸರಬರಾಜು ಮಾಡಲು ಗುತ್ತಿಗೆದಾರರಿಗೆ ಅಧಿಕಾರಿಗಳು ಮಾರ್ಗದರ್ಶನ ಸಲಹೆ ಸೂಚನೆಯನ್ನು ನೀಡಬೇಕು ಎಂದು ಹೇಳಿದರು.
ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಣಿ
ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಶ್ರಮ್ ಪೋರ್ಟಲ್‍ನಲ್ಲಿ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ನೋಂದಾಯಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆದ್ದರಿಂದ ಜಿಲ್ಲೆಯ ಅಸಂಘಟಿತ ಕೈಮಗ್ಗ ಹಾಗೂ ವಿದ್ಯುತ್‍ಮಗ್ಗ ನೇಕಾರರು, ನೇಕಾರ ಕಾರ್ಮಿಕರು ನೋಂದಾಯಿಸಿಕೊಳ್ಳುವಂತೆ ಕೊರಲಾಗಿದೆ. ಸಾಮಾನ್ಯ ಸೇವಾ ಕೇಂದ್ರ ಅಥವಾ ಆ್ಯಪ ಮೂಲಕ ಸ್ವಯಂ ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ನೋಂದಾಯಿಸಿದ ಅಭ್ಯರ್ಥಿಗಳಿಗೆ ತಕ್ಷಣ ಸ್ಥಳದಲ್ಲೆ ಗುರುತಿನ ಚೀಟಿ ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
ದೇಶಾದ್ಯಂತ ಅಕ್ಕಿಯ ಬೆಲೆಯಲ್ಲಿ ಭಾರೀ ಏರಿಕೆ ಆಗುತ್ತಿದ್ದು ಜನಸಾಮಾನ್ಯರಿಗೆ ಅಕ್ಕಿ ಬೆಲೆ ಏರಿಕೆ ಹೊರೆಯಾಗಿ ಪರಿಣಮಿಸಿದೆ. ಸದ್ಯ ಅಕ್ಕಿ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಹೊಸ ಉಪಾಯಕ್ಕೆ ಮುಂದಾಗಿದೆ. ಹೌದು ಭಾರತೀಯ ಆಹಾರ ನಿಗಮದ ಉಗ್ರಾಣದಲ್ಲಿರುವ ಅಕ್ಕಿಯನ್ನು ಭಾರತ್ ಬ್ರ್ಯಾಂಡ್ ಹೆಸರಿನಲ್ಲಿ ಮಾರಾಟ ಮಾಡುವುದಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಚರ್ಚೆಗಳು ನಡೆದಿದ್ದು ಒಂದು ಕೆಜಿ ಅಕ್ಕಿಗೆ ಎಷ್ಟು ಹಣ ವಿಧಿಸಲಾಗುತ್ತದೆ ಎಂಬುದು ಇನ್ನು ನಿರ್ಧಾರವಾಗಿಲ್ಲ ಎಂದು ಹೇಳಲಾಗುತ್ತಿದೆ. ಲೋಕಸಭೆ ಚುನಾವಣಾ ಚರ್ಚಾ ವಿಷಯದಲ್ಲಿ ಅಕ್ಕಿ ಬೆಲೆ ಏರಿಕೆ ಪ್ರಮುಖ ವಿಷಯವಾಗುವ ಕಾರಣದಿಂದ ಸರ್ಕಾರ ಈ ಕ್ರಮ ಕೈಗೊಳ್ಳಲು ಮುಂದಾಗಿದೆ ಎನ್ನಲಾಗಿದೆ.
CISFಗೆ ನೂತನ ಡಿಜಿ ನೇಮಕ
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಪ್ರಪ್ರಥಮ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರು ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ರಾಜಸ್ಥಾನ ಕೆಡರ್‌ನ 1989 ಬ್ಯಾಚಿನ IPS ಅಧಿಕಾರಿ ನೀನಾ ಸಿಂಗ್ ಅವರನ್ನ ಪ್ರಧಾನ ನಿರ್ದೇಶಕಿಯಾಗಿ ನೇಮಿಸಲಾಗಿದೆ.2024 ಜುಲೈ 31ರಂದು ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಅಲ್ಲಿಯವರೆಗೆ ಅವರೂ ಸಿಐಎಸ್‌ಎಫ್ ಡಿಜಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.