News

Today's weather ರಾಜ್ಯದ ಹಲವು ಜಿಲ್ಲೆಯಲ್ಲಿ ಬಿಸಿಲು ಹೆಚ್ಚಳ!

25 October, 2023 11:11 AM IST By: Hitesh
Today's weather is sunny in many districts of the state!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಳವಾಗಿರುವುದು ವರದಿಯಾಗಿದೆ.

ಸಾಮಾನ್ಯವಾಗಿ ಅಕ್ಟೋಬರ್‌ ತಿಂಗಳು ಹಾಗೂ ನವೆಂಬರ್‌ ತಿಂಗಳ ಪ್ರಾರಂಭದ ಹಂತದಲ್ಲಿ ರಾಜ್ಯದಲ್ಲಿ ಚಳಿಗಾಲದ ವಾತಾವರಣವಿರುತ್ತಿತ್ತು.

ಆದರೆ, ಈಗ ಬಿಸಿಲು ಹೆಚ್ಚಾಗುತ್ತಿದೆ. ಇದು ಹವಾಮಾನ ಬದಲಾವಣೆಯ ಮುನ್ಸೂಚನೆ ಎಂದು ಹೇಳಲಾಗುತ್ತಿದೆ. 

ಉಷ್ಣಾಂಶ ಹೆಚ್ಚಳದ ಪ್ರದೇಶ   

ರಾಜ್ಯದ ಹಲವು ಭಾಗದಲ್ಲಿ ಉಷ್ಣಾಂಶ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ 

ರಾಯಚೂರು, ವಿಜಯಪುರ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು

ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿರುಗಾಳಿಯ ಮುನ್ನೆಚ್ಚರಿಕೆ: ಇಲ್ಲ

ಮೀನುಗಾರರಿಗೆ ಎಚ್ಚರಿಕೆ: ಇಲ್ಲ

ಮುಂದಿನ 24 ಗಂಟೆ ಬೆಂಗಳೂರಿನ ವಾತಾವರಣ

ಬುಧವಾರ ಹಾಗೂ ಗುರುವಾರ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ

ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.

ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ.

ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇನ್ನು ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.