News

ಹವಾಮಾನ ವರದಿ: ಭಾರೀ ಮಳೆ ಮುನ್ನೆಚ್ಚರಿಕೆ? ಎಲ್ಲೆಲ್ಲಿ..?

05 July, 2023 2:16 PM IST By: Maltesh
Todays weather report of karnataka statae

ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಗದಗ, ಧಾರವಾಡ, ರಾಯಚೂರು, ಕಲಬುರ್ಗಿ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 40-50 ಕಿ.ಮೀ. ಇರುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45-55 ಕಿಮೀ ಇಂದ 65 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

07 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.