News

ಹವಾಮಾನ ವರದಿ: ಇಂದು ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ ಬೀಳಲಿದೆ..?

20 June, 2023 9:50 AM IST By: Maltesh
Today's weather Report

21 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು:  ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ  ಗುಡುಗು ಮಿಂಚಿನ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ  30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ  ಗುಡುಗು ಮಿಂಚಿನ ಸಾಧ್ಯತೆ ಇದೆ.

Free Smartphones : ಮಹಿಳೆಯರಿಗೆ ಸ್ಮಾರ್ಟ್‌ ಫೋನ್‌ ಖರೀದಿಗೆ ಹಣ

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:

ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಷಿಯಸ್ ಹಾಗೂ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.  ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. 

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

21 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.  ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಒಂದು ಎಕರೆ ಭೂಮಿಯಲ್ಲಿ ಕೋಟಿಗಟ್ಟಲೆ ಆದಾಯ ಕೊಡುವ ಕೃಷಿ  ಇದು

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.  ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.