News

ರಾಜ್ಯದ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ, ಇನ್ನೂ ಎಲ್ಲೆಲ್ಲಿ ಮಳೆ ?

29 June, 2023 11:07 AM IST By: Hitesh
Torrential rain in the coastal part of the state, where else is it raining?

ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಉತ್ತಮ ಮಳೆಯಾಗುತ್ತಿರುವುದು ವರದಿ ಆಗಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು; ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.

ಆದರೆ, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇನ್ನು ಮುಂದಿನ 24 ಗಂಟೆಯ ಅವಧಿಯಲ್ಲಿ

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ  ಧಾರಾಕಾರ ಮಳೆಯಾಗಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಂದಿನ 48 ಗಂಟೆ: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಅವಧಿಯಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. 

ಭಾರೀ ಮಳೆ ಮುನ್ನೆಚ್ಚರಿಕೆ: ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,

ಒಂದೆರಡು ಕಡೆಗಳಲ್ಲಿ ಅತೀ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು

ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಯ ಅವಧಿಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ

40ರಿಂದ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ.

ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ

ಬೆಂಗಳೂರು ನಗರ ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,

ಒಂದೆರಡು ಸಲ ಹಗುರದಿಂದ ಸಾಧಾರಣವಾಗಿ ಮಿಂಚುಗುಡುಗು ಸಹಿತ ಮಳೆಯಾಗಲಿದೆ.

ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

Image Courtesy: Pexels