News

Rain ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ!

10 October, 2023 10:36 AM IST By: Hitesh
Torrential rain in various districts of the state including Bangalore!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ (Rain) ಮಂಗಳವಾರ ಹಾಗೂ ಬುಧವಾರ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಭಾರೀ ಮಳೆ ಮುನ್ನೆಚ್ಚರಿಕೆ

ಮಂಗಳವಾರ ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಮಂಡ್ಯ ಹಾಗೂ

ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಂದಿನ 48 ಗಂಟೆಗಳು: ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು.

ರಾಮನಗರಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 36.2 ಡಿ.ಸೆ. ಕಲಬುರ್ಗಿ ನಲ್ಲಿ ದಾಖಲಾಗಿದೆ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 15.0 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಗಳು: ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಮತ್ತು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ

ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಉಷ್ಣಾಂಶಗಳ ಎಚ್ಚರಿಕೆ: ಮುಂದಿನ 48 ಗಂಟೆಗಳು:

ಗರಿಷ್ಠ ಉಷ್ಣಾಂಶಗಳು:

ಉತ್ತರ ಒಳನಾಡಿನ ವಿಜಯಪುರ, ಧಾರವಾಡ, ಗದಗ, ಕಲಬುರ್ಗಿ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿತ್ರದುರ್ಗ

ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ ಜಿಲ್ಲೆಗಳ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ

ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕನಿಷ್ಠ ಉಷ್ಣಾಂಶ:

ಉತ್ತರ ಒಳನಾಡಿನ ವಿಜಯಪುರದ ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3-4 ಡಿಗ್ರಿ ಕಡಿಮೆ ಇರುವ ಸಾದ್ಯತೆ ಇದೆ.

ಆದರೆ, ದಕ್ಷಿಣ ಒಳನಾಡಿನ ಕರ್ನಾಟಕದ ಕೊಡಗು, ಮೈಸೂರು, ದಾವಣಗೆರೆ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ

ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ಮುನ್ನೆಚ್ಚರಿಕೆ ನೀಡಿದೆ. 

ಗುಡುಗು ಮುನ್ನೆಚರಿಕೆ

ಮುಂದಿನ 48 ಘಂಟೆಗಳು:ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.

ಬಿರುಗಾಳಿಯ ಮುನ್ನೆಚರಿಕೆ

ಮುಂದಿನ 48 ಘಂಟೆಗಳು: ಇಲ್ಲ

ಮೀನುಗಾರರಿಗೆ ಎಚ್ಚರಿಕೆ: ಇಲ್ಲ

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ ?

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ.

ಸಂಜೆ/ರಾತ್ರಿಯ ವೇಳೆಗೆ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳ ಸಾಧ್ಯತೆಗಳಿವೆ.

ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ.

ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಸೋಮವಾರ ರಾಜ್ಯದ ವಿವಿಧ ಭಾಗದಲ್ಲಿ ಮಳೆ

ಸೋಮವಾರ ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ

ದುರ್ಬಲವಾಗಿತ್ತು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು.

ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಸೋಮವಾರಪೇಟೆ (ಕೊಡಗು ಜಿಲ್ಲೆ) 9; ಸಿ ಆರ್ ಪಟ್ನಾ

(ಹಾಸನ ಜಿಲ್ಲೆ) 8; ತುಮಕೂರು, ಹೊಸಕೋಟೆ (ಬೆಂಗಳೂರು ಗ್ರಾಮಾಂತರ ಜಿಲ್ಲೆ) ತಲಾ 7.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ, ನಲ್ಲಿ): ಬೇಲೂರು (ಹಾಸನ ಜಿಲ್ಲೆ) 6; ಗುಬ್ಬಿ (ತುಮಕೂರು ಜಿಲ್ಲೆ)

ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ), ಕೃಷ್ಣರಾಜಪೇಟೆ (ಮಂಡ್ಯ ಜಿಲ್ಲೆ) ತಲಾ 5; ನಾಪೋಕ್ಲು (ಕೊಡಗು ಜಿಲ್ಲೆ)

KSNDMC ಕ್ಯಾಂಪಸ್ (ಬೆಂಗಳೂರು ನಗರ ಜಿಲ್ಲೆ) ತಲಾ 4; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಕುಣಿಗಲ್ (ತುಮಕೂರು ಜಿಲ್ಲೆ)

ಜಯಪುರ, ಕಳಸ (ಎರಡೂ ಚಿಕ್ಕಮಗಳೂರು ಜಿಲ್ಲೆ), ಬಂಡೀಪುರ (ಚಾಮರಾಜನಗರ ಜಿಲ್ಲೆ) ತಲಾ 3; ಶೃಂಗೇರಿ ಎಚ್‌ಎಂಎಸ್ (ಚಿಕ್ಕಮಗಳೂರು ಜಿಲ್ಲೆ)

ಬೆಂಗಳೂರು ನಗರ, ಕೋಲಾರ, ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ), ಸಾಲಿಗ್ರಾಮ (ಮೈಸೂರು ಜಿಲ್ಲೆ), ಬೆಳ್ಳೂರು

(ಮಂಡ್ಯ ಜಿಲ್ಲೆ), ಅರಕಲಗೂಡು (ಹಾಸನ ಜಿಲ್ಲೆ), ಹೆಸರಘಟ್ಟ (ಬೆಂಗಳೂರು ನಗರ ಜಿಲ್ಲೆ)

ಚನ್ನಪಟ್ಟಣ (ರಾಮನಗರ ಜಿಲ್ಲೆ), (ಕೊಡಗು ಜಿಲ್ಲೆ), ಮಾಲೂರು (ಕೋಲಾರ ಜಿಲ್ಲೆ) ತಲಾ 1 ಸೆಂ.ಮೀ ಮಳೆಯಾಗಿದೆ

ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.