1. ಸುದ್ದಿಗಳು

ರಾಜ್ಯದಲ್ಲಿ ಧಾರಾಕಾರ ಮಳೆ; ಆರು ಜನ ಸಾವು!

Hitesh
Hitesh
torrential rains in the state; Six people died!

ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿನ್ಯೂಸ್‌ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.

1. ರಾಜ್ಯದಲ್ಲಿ ಧಾರಾಕಾರ ಮಳೆ; ಆರು ಜನ ಸಾವು!
2. ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಯುವತಿ ಸಾವು!
3. ಜೀರೋ ಟ್ರಾಫಿಕ್‌ ವ್ಯವಸ್ಥೆ ಬೇಡ ಎಂದ ಸಿ.ಎಂ
4. ಇಂದಿನಿಂದ ಮೂರು ದಿನ ವಿಧಾನಸೌಧ ಅಧಿವೇಶನ
5. ವಿಧಾನಸೌಧದ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ
6. ಜೇನುಸಾಕಾಣಿಕೆದಾರರಿಗೆ ನೆರವಾಗಲು ಕೇಂದ್ರ ಸರ್ಕಾರದಿಂದ ಮಾಸ್ಟರ್‌ಪ್ಲಾನ್‌! 

ಸುದ್ದಿಗಳ ವಿವರ ಈ ರೀತಿ ಇದೆ.

1. ರಾಜ್ಯದ ವಿವಿಧೆಡೆ ಭಾನುವಾರ ಧಾರಾಕಾರ ಮಳೆಯಾಗಿದ್ದು, ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮಳೆಯಿಂದ ಸಂಭವಿಸಿದ ಅನಾಹುತದಲ್ಲಿ

ಆರು ಜನ ಮೃತಪಟ್ಟಿದ್ದಾರೆ. ಬೆಂಗಳೂರಿನ ಅಂಡರ್‌ಪಾಸ್‌ವೊಂದರಲ್ಲಿ ಸಿಲುಕಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ.

ಇನ್ನು ಸಿಡಿಲಿನಿಂದ ನಾಲ್ವರು ಹಾಗೂ ಮರ ಬಿದ್ದು ಒಬ್ಬರು ಸಾವನ್ನಪ್ಪಿರುವುದು ವರದಿ ಆಗಿದೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಧಾರಾಕಾ ಮಳೆಯಾಗುವ ಸಾಧ್ಯತೆಯಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯ ಒಂದೆರೆಡು ಕಡೆ,

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,

ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದ

ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಭಾಗದಲ್ಲಿ ಬಿಸಿಲಿನ ಝಳ ತೀವ್ರವಾಗಿದೆ.
-------------- 

2. ಭಾನುವಾರ ರಾಜ್ಯದ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಿಂದ ಭಾರೀ ಅನಾಹುತ ಸಂಭವಿಸಿದೆ.   

ಮಳೆ ಅನಾಹುತದಲ್ಲಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ.

ಭಾನುವಾರ ಭಾರೀ ಮಳೆಯಿಂದಾಗಿ ಬೆಂಗಳೂರಿನ ವಿಧಾನಸೌಧದ ಬಳಿಯ ಕೆ.ಆರ್‌. ವೃತ್ತದ ಅಂಡರ್‌ ಪಾಸ್‌ನಲ್ಲಿ

ಕಾರೊಂದು ಮುಳುಗಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಕೆ.ಆರ್‌ ವೃತ್ತದಲ್ಲಿ ಕಾರಿನಲ್ಲಿ ಸಿಲುಕಿದ್ದ

ಐವರನ್ನು ಸ್ಥಳೀಯರು ರಕ್ಷಿಸಿದ್ದರು. ಯವತಿಯನ್ನು ಕೂಡಲೇ ರಕ್ಷಿಸಿ ಆಸ್ಪತ್ರೆಗೆ ಕರೆದೂಯ್ಯಲಾಗಿತ್ತಾದರೂ

ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಸರ್ಕಾರ ಮೃತರ ಕುಟುಂಬದವರಿಗೆ 5 ಲಕ್ಷ ರೂ.ಪರಿಹಾರ ಘೋಷಿಸಿದೆ.
--------------
3. ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರಿಗೆ ನೀಡಲಾಗಿರುವ ಜೀರೋ ಟ್ರಾಫಿಕ್‌ ವ್ಯವಸ್ಥೆ ಸೌಲಭ್ಯ ಬೇಡ ಎಂದು ಹೇಳಿದ್ದಾರೆ.

ಇನ್ನು ಅವರಿಗೆ ನೀಡುವ ಹಾರ, ತುರಾಯಿ ಹಾಗೂ ಶಾಲುಗಳನ್ನು ತರುವುದು ಬೇಡ ಇದರ

ಬದಲು ಪುಸ್ತಕಗಳನ್ನು ನೀಡುವಂತೆಯೂ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ನಿರ್ಧಾರಕ್ಕೆ ರಾಜ್ಯದ ಜನತೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.
--------------
4. ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಿದ್ದು, ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭಾ ಅಧಿವೇಶನ ನಡೆಯಲಿದೆ.

ಮೇ 22ರಿಂದ ಮೇ 24ರ ವರೆಗೆ ಅಧಿವೇಶನ ನಡೆಯಲಿದ್ದು, ಮೊದಲ ಎರಡು ದಿನ ಎಲ್ಲ ನೂತನ ಶಾಸಕರ ಪ್ರಮಾಣವಚನ ನಡೆದರೆ,

ಕೊನೆಯ ದಿನ ನೂತನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ.

ಈ ಬಗ್ಗೆ ಅಧಿಕೃತ ಆದೇಶವನ್ನು ರಾಜ್ಯಪಾಲರು ಹೊರಡಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
-------------- 

5. ಸೋಮವಾರದಿಂದ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ

2 ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸೋಮವಾರದಿಂದ ಮೂರು ದಿನ ಬೆಳಿಗ್ಗೆ 6ರಿಂದ ಮಧ್ಯಾರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ

ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ಈ ಆದೇಶದ ಅನ್ವಯ ನಿಷೇಧಿತ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ.

ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ ಎಂದಿದ್ದಾರೆ.
--------------
6. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಜೇನು ಪರೀಕ್ಷಾ ಪ್ರಯೋಗಾಲಯ ಹಾಗೂ ಹನಿ ಎಕ್ಸ್‌ಪೋವನ್ನು ಮಧ್ಯಪ್ರದೇಶದ

ರಾಜಾ ಭೋಜ್ ಕೃಷಿ ಕಾಲೇಜಿನ ಸಭಾಂಗಣ ಈಚೆಗೆ ಉದ್ಘಾಟಿಸಿದರು. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು

ಮಧ್ಯಪ್ರದೇಶದ ವಾರಸೋನಿ ಬಾಲಾಘಾಟ್‌ನಲ್ಲಿರುವ ರಾಜಾ ಭೋಜ್ ಕೃಷಿ ಕಾಲೇಜಿನಲ್ಲಿ ವಿಶ್ವ ಜೇನುನೊಣ ದಿನ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಸಿಂಗ್ ತೋಮರ್ ಅವರು ಕೇಂದ್ರ ಸರ್ಕಾರವು10,000 ಎಫ್‌ಪಿಒ ಯೋಜನೆ” ಅಡಿಯಲ್ಲಿ,

ದೇಶದಲ್ಲಿ ಜೇನುಸಾಕಣೆದಾರರನ್ನು ಉತ್ತೇಜಿಸಲು ಕ್ರಮ ವಹಿಸುತ್ತಿದೆ. ಈಗಾಗಲೇ 100 ಜೇನುಸಾಕಣೆದಾರರು

/ಜೇನು ಉತ್ಪಾದಕರ ಎಫ್‌ಪಿಒಗಳನ್ನು ನಿಯೋಜಿಸಲಾಗಿದೆ ಎಂದರು. 

Published On: 22 May 2023, 03:47 PM English Summary: torrential rains in the state; Six people died!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.