1. ಸುದ್ದಿಗಳು

Heavy Rain ರಾಜ್ಯದ ವಿವಿಧ ಭಾಗದಲ್ಲಿ ಇನ್ನು ಎರಡು ದಿನ ಧಾರಾಕಾರ ಮಳೆ; ಎಚ್ಚರ!

Hitesh
Hitesh
Torrential rains in various parts of the state for two more days; Beware!

ರಾಜ್ಯದ ಕರಾವಳಿ ಭಾಗ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ (Heavy Rain) ಧಾರಾಕಾರ ಮಳೆ ಮುಂದುವರಿದಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ನೋಡುವುದಾದರೆ, ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಹಾಗೂ ಒಳನಾಡಿನಲ್ಲಿ ದುರ್ಬಲವಾಗಿತ್ತು.

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.

ಭಾರೀ ಮಳೆ ವರದಿ: ರಾಜ್ಯದ ಕರಾವಳಿಯಲ್ಲಿ ಗುರುವಾರ ಭಾರೀ ಮಳೆಯಾಗಿರುವುದು ವರದಿ ಆಗಿದೆ. ಕುಂದಾಪುರದ ಉಡುಪಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಉಳಿದಂತೆ ಕ್ಯಾಸಲ್‌ ರಾಕ್‌ನಲ್ಲಿ 6 ಸೆಂ.ಮೀ, ಶಿರಾಲಿ ಪಿಟಿಓ, ಗೋಕರ್ಣ, ಅಂಕೋಲಾ, ಕಾರವಾರದ ಭಾಗದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ.

ಅಲ್ಲದೇ ಕೊಲ್ಲೂರು, ಕದ್ರಾ, ಹೊನ್ನಾವರ, ಕುಮಟಾದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.

ಇನ್ನು ಕೋಟ, ಸಿದ್ದಾಪುರ, ಗೇರುಸೊಪ್ಪ, ಮಂಕಿ, ಪಣಂಬೂರು ಭಾಗದಲ್ಲಿ ತಲಾ 3 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಸುಬ್ರಹ್ಮಣ್ಯ, ಮಾಣಿ, ಮೂಲ್ಕಿ, ಮಂಗಳೂರು ವಿಮಾನ ನಿಲ್ದಾಣದ ಭಾಗ, ಉಡುಪಿ, ಕಾರ್ಕಳದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. 

ರಾಜ್ಯದಲ್ಲಿ ಮಳೆ ಮುನ್ಸೂಚನೆ:

ರಾಜ್ಯದ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗಲಿದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಅಲ್ಲದೇ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಶುಕ್ರವಾರ ಹಾಗೂ ಶನಿವಾರ ಕರ್ನಾಟಕದ ಕರಾವಳಿ ಭಾಗದಲ್ಲಿ ಬಿರುಗಾಳಿಯು ಗಂಟೆಗೆ 40ರಿಂದ 45 ಕಿ.ಮೀನಿಂದ

55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರಲಿದೆ. ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶ

ಬೆಂಗಳೂರು ಹಾಗೂ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಇರಲಿದೆ. ಗರಿಷ್ಠ ಉಷ್ಣಾಂಶವು 30 ಮತ್ತು ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.  

Published On: 30 June 2023, 11:02 AM English Summary: Torrential rains in various parts of the state for two more days; Beware!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.