1. ಸುದ್ದಿಗಳು

ನಿರುದ್ಯೋಗಿಗಳಿಗೆ ಉಚಿತ ವಸತಿಯುತ ತರಬೇತಿ

ರಾಮನಗರ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯ ರುಡ್ ಸೆಟ್ ಸಂಸ್ಥೆ ವತಿಯಿಂದ ನಿರುದ್ಯೋಗ ಯುವಜನರಿಗೆ ಉಚಿತ ವಸತಿಯುತ 30 ದಿನಗಳ ಮೋಟರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ 18 ರಿಂದ 45 ವರ್ಷದ ಅಭ್ಯರ್ಥಿಗಳು ಇದೇ 9 ರಂದು ಬೆಳಗ್ಗೆ 10.30 ಗಂಟೆಗೆ ರುಡಸೆಟ್ ಸಂಸ್ಥೆ ಅರಿಶಿನಕುಂಟೆ, ನೆಲಮಂಗಲ ತಾಲೂಕು ನೇರವಾಗಿ ಸಂದರ್ಶನಕ್ಕೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 080-27728166ಗೆ ಸಂಪರ್ಕಿಸಲು ಕೋರಲಾಗಿದೆ.

ಆರ್ಥಿಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ:

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆದಾಯೋತ್ಪನ್ನ ಚಟುವಟಿಕೆಯನ್ನು ಕೈಗೊಳ್ಳಲು ಪ್ರತಿ ಫಲಾನುಭವಿಗೆ 50 ಸಾವಿರ ಆರ್ಥಿಕ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.
ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲಾ ಮಟ್ಟದಲ್ಲಿ ಸಮುದಾಯದ ಪರವಾಗಿ ಕೆಲಸ ನಿರ್ವಹಿಸುತ್ತಿರುವ ಪಯಣ ಸಂಸ್ಥೆ, ಲಾಯರ್ ತಿಮ್ಮಯ್ಯ ಕಟ್ಟಡ, ಪಿಎಲ್‌ಡಿ ಬ್ಯಾಂಕ್ ಹತ್ತಿರ, ರಾಮನಗರ ಟೌನ್, ಇಲ್ಲಿ ಉಚಿತವಾಗಿ ಅರ್ಜಿ ಪಡೆದು. ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಇದೇ 23 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಪಂಚಾಯಿತಿ ಭವನ, 2ನೇ ಮಹಡಿ, ರಾಮನಗರ ಜಿಲ್ಲೆ, ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published On: 08 October 2020, 08:21 AM English Summary: Training for unemployed

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.