News

ಪೊಲೀಸ್‌ ಸಿಬ್ಬಂದಿಗೆ ಗೋ ರಕ್ಷಣಾ ಕಾನೂನಿನ ತರಬೇತಿಗೆ ಚಿಂತನೆ- ಸಚಿವ ಪ್ರಭು ಚವ್ಹಾಣ

18 September, 2022 12:37 PM IST By: Maltesh
training the police personnel under cow protection law

ರಾಜ್ಯದ ಪೊಲೀಸ್‌ದ ಸಿಬ್ಬಂದಿಗೆ ಗೋರಕ್ಷಣೆಯ ತರಬೇತಿ ನೀಡಲು ಪಶುಸಂಗೋಪಲಾ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ಪಶುಸಂಗೋಪನಾ ಇಲಾಖೆಯ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಾಕಷ್ಟು ಗೋ ಕಳ್ಳರು ಈ ಕಾಯ್ದೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. "ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ತಡೆಗಟ್ಟಲು ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡುವುದು ಇಂದಿನ ದಿನದ ತುರ್ತು ಎಂದು ಅವರು ಹೇಳಿದರು.

SBI ಬೃಹತ್‌ ನೇಮಕಾತಿ..5000 ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಸಾಯಿಖಾನೆಗಳ ಮಾಲೀಕರು ಜಾನುವಾರುಗಳ ಅಕ್ರಮ ಸಾಗಾಟ ಕೇಸ್‌ಗಳ ದಂಡ ಹಾಗೂ ಶಿಕ್ಷೆಯಿಂದ ಕಣ್ತಪ್ಪಿಸಿಕೊಳ್ಳುತ್ತಿದ್ದಾರೆ.  2020 ರ ಜಾನುವಾರು ಹತ್ಯೆ ಮತ್ತು ಸಂರಕ್ಷಣಾ ಕಾಯ್ದೆಯ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿರುವುದು ಇವತ್ತು ಇಂತಹ ಘಟನೆಗಳು ನಡೆಯುತ್ತಿವೆ.

ಈ ಸಂಬಂಧ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಟ್ಟದ ಪೊಲೀಸರಿಗೆ ತರಬೇತಿ ನೀಡಲು ಮತ್ತು ಗೋಹತ್ಯೆ ಮತ್ತು ಆಹಾರರಹಿತ ಗೋವುಗಳ ಅಕ್ರಮ ಸಾಗಾಟ ಪ್ರಕರಣಗಳಲ್ಲಿ ಅಪರಾಧಿಗಳನ್ನು ನ್ಯಾಯದ ಮುಂದೆ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ಸಚಿವರು ಹೇಳಿದರು.

ಪೋಸ್ಟ್ ಆಫೀಸ್ ಸೂಪರ್‌ಹಿಟ್ ಯೋಜನೆ, ಕೆಲವೇ ತಿಂಗಳಲ್ಲಿ ಹಣ ದ್ವಿಗುಣಗೊಳ್ಳುತ್ತದೆ! ಇಲ್ಲಿ ತಿಳಿಯಿರಿ

ಇನ್ಮುಂದೆ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ

ಈ ವರ್ಷದ ಡಿಸೆಂಬರ್ ವೇಳೆಗೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಗೋಶಾಲೆಯನ್ನು ಪ್ರಾರಂಭಿಸಲಾಗುವುದು ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಪ್ರಮಾಣಪತ್ರವನ್ನು ಸಲ್ಲಿಸಿದೆ.ಈ ಸಂಬಂಧವಾಗಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು ಎಂದು ತಿಳಿದು ಬಂದಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ‘ಹೆಚ್ಚುವರಿಯಾಗಿ 70 ಗೋಶಾಲೆಗಳನ್ನು ತೆರೆಯಲು ಸರ್ಕಾರ ತೀರ್ಮಾನಿಸಿದೆ ಎನ್ನುವುದನ್ನು ವಿವರಿಸಿ, ಯಾವ ತಿಂಗಳಲ್ಲಿ, ಯಾವ ಜಿಲ್ಲೆಯಲ್ಲಿ ಗೋಶಾಲೆ ಕಾರ್ಯಾರಂಭ ಮಾಡಲಿವೆ ಎಂಬ ವಿವರವಾದ ವೇಳಾಪಟ್ಟಿಯನ್ನು ಸಲ್ಲಿಸಿದರು.

ಹೊಸ 70 ಗೋಶಾಲೆಗಳ ನಿರ್ಮಾಣಕ್ಕೆ ₹20 ಕೋಟಿ ಅನುದಾನ, ಕಾಮಗಾರಿ ಚಾಲ್ತಿಯಲ್ಲಿರುವ ಗೋಶಾಲೆಗಳಿಗೆ ₹15 ಕೋಟಿ ಅನುದಾನ ಸೇರಿದಂತೆ ಗೋಶಾಲೆಗಳ ಸ್ಥಾಪನೆಗೆ ಒಟ್ಟು ₹50 ಕೋಟಿ ಅನುದಾನ ಮೀಸಲಿಡಲಾಗಿದೆʼ ಎಂದರು.

ಮುದ್ರಾ ಯೋಜನೆ:4 ಸಾವಿರ ರೂ ಅಪ್ಲಿಕೇಶನ್‌ ಫೀ ಕಟ್ಟಿದ್ರೆ ₹10 ಲಕ್ಷ ಸುಲಭ ಸಾಲ..!ಸರ್ಕಾರ ಹೇಳಿದ್ದೇನು..?