News

ಜೂನ್ 25 ರಿಂದ ಭಾರೀ ಮಳೆ ಸಂಭವ?

23 June, 2020 10:11 AM IST By:

ಕರಾವಳಿಯಲ್ಲಿ ಮಾತ್ರ ಚುರುಕಾಗಿರುವ ಮಂಗಾರು ಸೋಮವಾರದಿಂದ ದಕ್ಷಿಣ ಒಳನಾಡಿನಲ್ಲೂ ಚುರುಕಾಗಿದೆ. ಇದೇ 25ರಿಂದ ರಾಜ್ಯದಲ್ಲಿ ಮುಂಗಾರು ಚುರುಕು ಗೊಳ್ಳಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆ ಸುರಿಯುತ್ತಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೂನ್ 24 ರವರೆಗೆ ಯಲ್ಲೋ ಅಲರ್ಟ್:

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 24ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. 2.8ರಿಂದ 3.3 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುವ ಸಂಭವವಿದ್ದು, ಮೀನುಗಾರರು ಮಂಗಳವಾರ ಕಡಲಿಗೆ ಇಳಿಯದಂತೆ ಸೂಚಿಸಿದೆ.

25ರಿಂದ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಐದು ದಿನಗಳವರೆಗೆ ಸಾಧಾರಣ ಮಳೆಯಾಗಲಿದೆ. ಜುಲೈ ಮೊದಲ ವಾರದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ ಎಂದು ಕೃಷಿ ಹವಾಮಾನ ತಜ್ಞರು ನಿರೀಕ್ಷಿಸಿದ್ದರು. ಆದರೆ, ಜುಲೈಗೂ ಮುನ್ನವೇ ಮುಂಗಾರು ಬಿರುಸುಗೊಳ್ಳುವ
ಸಾಧ್ಯತೆ ಇದೆ. ಅನಕೂಲಕರ ವಾತಾವರಣವಿದ್ದರೆ ರಾಜ್ಯದಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.