1. ಸುದ್ದಿಗಳು

ಪಿ.ಎಂ ಕಿಸಾನ್‌ ಇಕೆವೈಸಿಗೆ ಎರಡೇ ದಿನ ಬಾಕಿ: ಮಾಹಿತಿ ನೀಡದಿದ್ದರೆ ಹಣ ಕಡಿತ ಸಾಧ್ಯತೆ!

Hitesh
Hitesh
Two days due to PM Kisan EKYC: If information is not provided, money may be cut!

1. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಇಕೆವೈಸಿ ಭರ್ತಿ ಮಾಡಲು ಇನ್ನು ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ.

1.ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಇಕೆವೈಸಿ ಭರ್ತಿ ಮಾಡಲು ಇನ್ನು ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ.

ಪಿಎಂ ಕಿಸಾನ್‌ನ ಎಲ್ಲಾ ಫಲಾನುಭವಿಗಳಿಗೆ 2022ರ 30 ನವೆಂಬರ್ ಮೊದಲು eKYC ನವೀಕರಿಸಲು ಸೂಚಿಸಲಾಗಿದೆ.

e-KYC ಅನ್ನು ನವೀಕರಿಸದಿದ್ದರೆ, ಸರ್ಕಾರವು 2ಸಾವಿರ ರೂ.ಗಳನ್ನು ವರ್ಗಾಯಿಸುವುದಿಲ್ಲ.

ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯ 13 ನೇ ಕಂತನ್ನು ಡಿಸೆಂಬರ್ ಅಂತ್ಯ

ಅಥವಾ ಜನವರಿ ಮೊದಲ ವಾರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಹೀಗಾಗಿ,ಇದಕ್ಕೂ ಮೊದಲು, ಎಲ್ಲಾ ರೈತರು ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಫಲಾನುಭವಿಗಳ ಅರ್ಜಿ ನಮೂನೆಯು ಅಪೂರ್ಣವಾಗಿದ್ದರೆ, ಅವರು ಪ್ರೋತ್ಸಾಹಧನ ಪಡೆಯುವಲ್ಲಿ ಸಮಸ್ಯೆ ಆಗುವ ಸಾಧ್ಯತೆ ಇದೆ. 

ಕಬ್ಬಿಗೆ ಎಫ್‌ಆರ್‌ಪಿ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಏಳುದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ಬಾರ್‌ಕೋಲ್‌ ಚಳವಳಿ ನಡೆಸಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘ,ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಕಬ್ಬು ಬೆಳೆಗಾರ ರೈತರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯನದಲ್ಲಿ ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನವೂ ಮುಂದುವರಿದಿದೆ.

ರಾಜ್ಯದ ವಿವಿಧ ಜಿಲ್ಲೆಯಿಂದ ಬಂದಿದ್ದ ನೂರಾರು ರೈತ ಮಹಿಳೆಯರು ಧರಣಿಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನಂತರ ಬಾರ್ ಕೋಲ್ ಇಡಿದು ಬೀಸುವ ಮೂಲಕ ಬಾರ್‌ಕೋಲ್‌ ಚಳವಳಿ ನಡೆಸಿದರು. 

ದೇಶಕ್ಕೆ ಅನ್ನ ನೀಡುವ ರೈತನನ್ನು ಏಳು ದಿನಗಳಿಂದ ರಸ್ತೆಯಲ್ಲಿ ಮಲಗಿಸಿರುವ ಸರ್ಕಾರಕ್ಕೆ ರೈತರ ಕಷ್ಟಕ್ಕಿಂತ ಸಕ್ಕರೆ ಕಾರ್ಖಾನೆ ಮಾಲೀಕರ ಹಿತವೇ ಮುಖ್ಯವಾಗಿದೆ.

ರೈತ ಮಹಿಳೆಯರು ಕಿತ್ತೂರ್ ರಾಣಿ ಚೆನ್ನಮ್ಮನ ಅವತಾರ ತಾಳುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಲಿ, ಕಬ್ಬುದರ ಏರಿಕೆ ಮಾಡಲಿ ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ. 

ಅಡಿಕೆ ಬೆಳೆ ಹವಾಮಾನ ಆಧಾರಿತ ಬೆಳೆ ವಿಮೆ ವ್ಯಾಪ್ತಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

Thangavel

ಹಿಂದಿ ಹೇರಿಕೆಯನ್ನು ವಿರೋಧಿಸಿ 85 ವರ್ಷದ ರೈತರೊಬ್ಬರು ತಮಿಳುನಾಡಿನ ಡಿಎಂಕೆ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಮೃತಪಟ್ಟವರನ್ನು ಡಿಎಂಕೆಯ ಕೃಷಿ ಒಕ್ಕೂಟದ ಮಾಜಿ ಸಂಘಟಕ ತಂಗವೇಲ್‌ ಎಂದು ಗುರುತಿಸಲಾಗಿದೆ.

ತಂಗವೇಲ್‌ ಅವರು ಹಿಂದಿ ಹೇರಿಕೆಯನ್ನು ವಿರೋಧಿಸಿ ಥಲೈಯೂರಿನ ಡಿಎಂಕೆ ಪಕ್ಷದ ಕಚೇರಿಯ ಎದುರು

ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು ಪ್ರತಿಭಟಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

basavaraj bommai

ಕೇಂದ್ರ ಸರ್ಕಾರದ ಅನುಮತಿ ಪಡೆದು ಡಿಸೆಂಬರ್ ಅಂತ್ಯದೊಳಗೆ ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ಶರಾವತಿ ಸಂತ್ರಸ್ತರ ಸಮಸ್ಯೆ ಇದೆ. ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮುನ್ನವೇ ಈ ಸಮಸ್ಯೆ ಪರಿಹರಿಸಲು ಅವಕಾಶ ಇತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅರಣ್ಯ ಸಂರಕ್ಷಣೆ ಕಾಯ್ದೆಯಡಿ ಕೇಂದ್ರದ ಅನುಮತಿ ಪಡೆಯದೇ ಶರಾವತಿ ಸಂತ್ರಸ್ತರಿಗೆ ರಾಜ್ಯ ಸರ್ಕಾರ ನೀಡಿದ್ದ ಅರಣ್ಯ ಭೂಮಿ ಮಂಜೂರಾತಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
-------
ಗದಗಿನ ರೈತರೊಬ್ಬರು ತಾವು ಬೆಳೆದ 205 ಕೆ.ಜಿ ಈರುಳ್ಳಿಯನ್ನು ಮಾರಾಟ ಮಾಡಲು ಬೆಂಗಳೂರಿನ ಮಾರುಕಟ್ಟೆ ತಂದಿದ್ದು, ಒಟ್ಟು 205 ಕೆ.ಜಿ ಈರುಳ್ಳಿಗೆ ಕೇವಲ 8.36 ರೂಪಾಯಿ ಬೆಲೆ ಸಿಕ್ಕಿದ್ದು ರೈತ ಕಂಗಾಲಾಗಿದ್ದಾನೆ.

ಗದುಗಿನ ರೈತರೊಬ್ಬರು ಬೆಂಗಳೂರಿನ ಯಶವಂತಪುರ ಮಾರುಕಟ್ಟೆಯಲ್ಲಿ 205 ಕೆಜಿ ಈರುಳ್ಳಿ ಮಾರಾಟ ಮಾಡಿ 8.36 ರೂ. ಪಡೆದುಕೊಂಡಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಬೆಂಗಳೂರಿಗೆ ತರದಂತೆ ಎಚ್ಚರಿಸುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಈರುಳ್ಳಿ ಮಾರಾಟದ ರಸೀದಿ ಪೋಸ್ಟ್ ಮಾಡಿದ್ದು, ಪೋಸ್ಟ್‌ ವೈರಲ್‌ ಆಗಿದೆ.
-------
2022–23ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮಾರ್ಚ್‌ 9ರಿಂದ 29ರವರೆಗೆ ಪರೀಕ್ಷೆಗಳು ನಡೆಯಲಿವೆ. ಒಟ್ಟು 20 ದಿನಗಳ ಕಾಲ ವಿವಿಧ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
-------
ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರುವ ಕೆನೆಭರಿತ ಹಾಲಿನ ಪುಡಿ ಬದಲಿಗೆ ಇನ್ನು ಮುಂದೆ ಟೆಟ್ರಾಪ್ಯಾಕ್‌ ಹಾಲು ವಿತರಿಸಲು ಕೆಎಂಎಫ್ ಪ್ರಸ್ತಾವ ಸಲ್ಲಿಸಿದೆ. ಈ ಸಂಬಂಧ ಕೆಎಂಎಫ್ ಸರ್ಕಾರಕ್ಕೆ ಪತ್ರ ಬರೆದಿದ್ದು, ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆ ಜಾರಿಗೆ ಬರುವ ಸಾಧ್ಯತೆ ದೆ ಎನ್ನಲಾಗಿದೆ. ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಹಾಲಿನ ಪೌಡರ್ ವಿತರಿಸಲಾಗುತ್ತಿದೆ. ಟೆಟ್ರಾಪ್ಯಾಕ್‌ ಹೆಚ್ಚು ಸುರಕ್ಷಿತ ಹಾಗೂ ಸುಲಭವಾಗಿ ಪೂರೈಸಬಹುದು ಎನ್ನುವ ಉದ್ದೇಶದಿಂದ ಈ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.    
------- 

Published On: 29 November 2022, 03:22 PM English Summary: Two days due to PM Kisan EKYC: If information is not provided, money may be cut!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.