News

ರಾಜ್ಯದಲ್ಲಿ ಎರಡು ದಿನ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್ ಘೋಷಣೆ

22 November, 2020 6:00 AM IST By:

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಯಿಂದಾಗಿ ರಾಜ್ಯದಲ್ಲಿ ನವೆಂಬರ್ 25 ರಿಂದ ಮತ್ತೆ ಎರಡು ದಿನಗಳ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನವೆಂಬರ್ 25ರಂದು ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ನ.26ರಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿರುವುದರಿಂದ  ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಹಿಂದೆ ದೀಪಾವಳಿ ದಿನವೂ ರಾಜ್ಯದಲ್ಲಿ ಮಳೆ ಸುರಿದು ಹಬ್ಬದ ಸಂಭ್ರಮವನ್ನು ಮಂಕಾಗಿಸಿತ್ತು.ನ. 18 ಮತ್ತು 19 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಕೋಲಾರ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗಿತ್ತು.  ಇದೀಗ ಮತ್ತೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರಿಂದ ಬೆಳೆ ಕಟಾವು ಮಾಡುತ್ತಿರುವ ರೈತರಿಗೆ ಆತಂಕ ಎದುರಾಗಿದೆ.