ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
Union budget 2022-23 : ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಎರಡನೆ ಅವಧಿಯ ಈ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳೀಗ್ಗೆ 11 ಗಂಟೆಗೆ ಮಂಡಿಸಲು ಆರಂಭ ಮಾಡಿದ್ದಾರೆ.
ಈ ಬಜೆಟ್‌ನಲ್ಲಿ ದೇಶದ ಜನತೆ ಸಾಕಷ್ಟು ಭರವಸೆಗಳನ್ನು ಇಟ್ಟುಕೊಂಡಿದೆ.
ಈಗಾಗಲೇ ಬೆಳಿಗ್ಗೆ ಆರಂಭವಾದ ಬಜೆಟ್ ಮಂಡನೆಯ ಲೈವ್‌ನಲ್ಲಿ ಸೀತಾರಾಮನ್ ಅವರು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ವಿಷಯಗಳನ್ನು ಬಿಚ್ಚಿಟ್ಟಿದ್ದಾರೆ.
ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಕೃಷಿ ಸಾಲವನ್ನು ₹ 20 ಲಕ್ಷ ಕೋಟಿ ಹೆಚ್ಚಿಸುವ ಗುರಿಯನ್ನು ಹೊಂದಿದ್ದು ರೈತರ ಏಳ್ಗೆಗೆ ಶ್ರಮಿಸಲಾಗುವುದು ಎಂದಿದ್ದಾರೆ.
ಅವುಗಳಲ್ಲಿ ಪ್ರಮುಖವಾಗಿ ಮೀನುಗಾರರಿಗೆ 6 ಸಾವಿರ ಕೋಟಿ ರೂಪಾಯಿ ಮೊತ್ತವನ್ನು ಮೀಸಲಿಟ್ಟಿರುವುದು ಪ್ರಮುಖವಾಗಿದೆ.
ಗ್ರೀನ್ ಎನರ್ಜಿಯನ್ನು ಉತ್ತೇಜನ ಮಾಡುವುದು ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯ ವಿಷಯಗಳಲ್ಲಿ ಒಂದಾಗಿದೆ.
ಅತೀ ಮುಖ್ಯವಾಗಿ ಕೃಷಿ ವೇಗವರ್ಧಕ ನಿಧಿ ಸ್ಥಾಪನೆ ಮಾಡುವುದು ಸೇರಿದೆ. ಮುಖ್ಯವಾಗಿ ಕೃಷಿ ವೇಗವರ್ಧಕ ನಿಧಿ ಸ್ಥಾಪನೆ ಮಾಡುವ ಮೂಲಕ ರೈತರಿಗೆ ಆರ್ಥಿಕ ಶಕ್ತಿಯನ್ನು ತುಂಬಲು ಕೇಂದ್ರ ಸರ್ಕಾರವು ಮುಂದಾಗಿದೆ.