ಇತ್ತೀಚೆಗೆ ಇಂಡಿಯಾ ಟುಡೇ ಮತ್ತು ಮಾರ್ಕೆಟ್ ಡೆವಲಪ್ಮೆಂಟ್ ರಿಸರ್ಚ್ ಏಜೆನ್ಸಿ ಕೈಗೊಂಡ ರಾಷ್ಟ್ರವ್ಯಾಪಿ ವಿಶ್ವವಿದ್ಯಾಲಯಗಳ ಸಮೀಕ್ಷೆಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತದಲ್ಲಿ ರಾಯಚೂರು ವಿಶ್ವವಿದ್ಯಾಲಯ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ತಿಳಿಸಿದ್ದಾರೆ.
ಗುಣಮಟ್ಟದ ವಿಚಾರದಲ್ಲಿ ಸರ್ಕಾರಿ ವಿವಿಗಳ ಪಟ್ಟಿಯಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯವು 31ನೇ ಸ್ಥಾನದಲ್ಲಿದೆ. ಈ ಸಾಧನೆಗೆ ಕೃಷಿ ವ್ಯವಸ್ಥಾಪನೆ ಮಂಡಳಿಯ ಸದಸ್ಯರು, ಆಡಳಿತ ಬೋಧಕ ವರ್ಗ ಕಾರಣ ಎಂದು ಅವರು ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ಈ ಸಾಧನೆಗೆ ವಿ.ವಿ.ವ್ಯವಸ್ಥಾಪನ ಆಡಳಿತ ಮಂಡಳಿಯ ಹಿಂದಿನ ಸರ್ವ ಸದಸ್ಯರು ಮತ್ತು ಪ್ರಸ್ತುತ ವಿ.ವಿ.ಕುಲಪತಿ ಡಾ.ಕೆ.ಎನ್. ಕಟ್ಟಿಮನಿ, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾರ್ಮಿಕರು ಸಂತೋಷ ವ್ಯಕ್ತಪಡಿಸಿದ್ದಾರೆ.
Share your comments