ಈಚೆಗೆ ವ್ಯಕ್ತಿಯೊಬ್ಬರು ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು ತೀವ್ರ ಚರ್ಚೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ದೆಹಲಿಯ ಪೆರೇಡ್: ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ!
ಈ ಹಿನ್ನೆಲೆಯಲ್ಲಿ ವಿಮಾನದಲ್ಲಿ ಮದ್ಯ ಸೇವನೆ ಸೇವೆ ನೀಡುವ ಬಗ್ಗೆ ಮರು ಚಿಂತನೆ ನಡೆದಿದೆ. ಶಂಕರ್ ಮಿಶ್ರಾ ಎಂಬ ವ್ಯಕ್ತಿ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಇಒ ಕ್ಯಾಂಬ್‌ಬೆಲ್ ವಿಲ್ಸನ್ ಅವರು ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಈ ಸಂಬಂಧ ವಿಮಾನದ ಪೈಲಟ್, ನಾಲ್ವರು ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದ್ದು, ವಿಮಾನದಲ್ಲಿ ಮದ್ಯ ಪೂರೈಕೆ ನೀತಿಯನ್ನು ಪರಾಮರ್ಶಿಸುವುದಾಗಿ ತಿಳಿಸಿದ್ದಾರೆ.
ವಿಮಾನದಲ್ಲಿ ಪ್ರಯಾಣಿಕರೊಬ್ಬರ ಅನುಚಿತ ವರ್ತನೆಯಿಂದ ಸಹ ಪ್ರಯಾಣಿಕರಿಗೆ ಮುಜುಗರವುಂಟಾಗಿದೆ. ಈ ಬಗ್ಗೆ ವಿಷಾದವಿದೆ. ಈ ವಿಚಾರವನ್ನು ಇನ್ನಷ್ಟು ಸೂಕ್ತವಾಗಿ ನಿರ್ವಹಿಸಬಹುದಿತ್ತು. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ಸಂಸ್ಥೆ ಬದ್ಧವಾಗಿದೆ ಎಂದು ವಿಲ್ಸನ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ವಿಮಾನದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನೋಟಿಸ್ ಸಹ ನೀಡಲಾಗಿತ್ತು. ಎಐ–102 ವಿಮಾನದಲ್ಲಿ ಕರ್ತವ್ಯದಲ್ಲಿದ್ದ ಒಬ್ಬ ಪೈಲಟ್ ಹಾಗೂ ನಾಲ್ವರು ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಜೊತೆಗೆ ವಿಚಾರಣೆ ಮುಗಿಯುವರೆಗೂ ಅವರನ್ನು ಅಮಾನತಿನಲ್ಲಿ ಇರಿಸಲಾಗಿದೆ ಎಂದಿದ್ದಾರೆ.
Pm Kisan| ಪಿ.ಎಂ ಕಿಸಾನ್ ಅಪ್ಡೇಟ್: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ
ಮುಂದೆ ಇಂತಹ ಘಟನೆಗಳು ನಡೆದರೆ ತಪ್ಪದೇ ವರದಿ ಮಾಡುವಂತೆಯೂ ಸಂಸ್ಥೆಯ ಸಿಬ್ಬಂದಿಗೆ ಅವರು ಮನವಿ ಮಾಡಿದ್ದಾರೆ.
ಘಟನೆಯ ನಿರ್ವಹಣೆ, ಮದ್ಯ ಪೂರೈಕೆ, ಪ್ರಯಾಣದ ವೇಳೆ ದೂರು ದಾಖಲು ವ್ಯವಸ್ಥೆ ಸೇರಿದಂತೆ ಒಟ್ಟಾರೆ ಪ್ರಕರಣದ ನಿರ್ವಹಣೆಯಲ್ಲಿ ಸಂಸ್ಥೆಯ ಸಿಬ್ಬಂದಿಯಿಂದ ಯಾವುದಾದರೂ ಲೋಪವಾಗಿದೆಯೇ ಎಂಬಂತಹ ವಿಚಾರಗಳ ಕುರಿತು ಏರ್ ಇಂಡಿಯಾ ಆಂತರಿಕ ತನಿಖೆ ಕೈಗೊಂಡಿದೆ. ವಿಮಾನ ಪ್ರಯಾಣದ ವೇಳೆ ಮದ್ಯ ಪೂರೈಸುವ ನೀತಿಯನ್ನು ಪರಿಷ್ಕರಿಸುವ ಕುರಿತು ಸಿಇಒ ಅವರು ಮಾತನಾಡಿದ್ದಾರೆ.
ವಿಮಾನ ಪ್ರಯಾಣದ ವೇಳೆ ನಡೆಯುವ ಈ ರೀತಿಯ ಘಟನೆಯನ್ನು ಲಿಖಿತವಾಗಿ ವರದಿ ಮಾಡುವ ಬದಲಾಗಿ ಡಿಜಿಟಲ್ ರೂಪಕ್ಕೆ ಪರಿವರ್ತಿಸಲು ಚಿಂತನೆ ನಡೆದಿದೆ.
ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಶಂಕರ್ ಮಿಶ್ರಾ ಎಂಬ ವ್ಯಕ್ತಿಯನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಶನಿವಾರ ಬಂಧಿಸಿದ್ದಾರೆ. ದೆಹಲಿ ಕೋರ್ಟ್ ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Aadhaar Card| ಆಧಾರ್ ಕಾರ್ಡ್‌ನೊಂದಿಗೆ ಪಾನ್‌ಕಾರ್ಡ್ ಜೋಡಣೆ ಕಡ್ಡಾಯ: ಮತ್ತೊಮ್ಮೆ ಗಡುವು! Pan Card
ಕಳೆದ ವರ್ಷದ ನವೆಂಬರ್ 26ರಂದು ನ್ಯೂಯಾರ್ಕ್–ದೆಹಲಿ ಮಾರ್ಗದ ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಿರಿಯ ಮಹಿಳೆಯ ಮೇಲೆ ಮದ್ಯದ ಅಮಲಿನಲ್ಲಿದ್ದ ಆರೋಪಿಯು ಮೂತ್ರ ವಿಸರ್ಜನೆ ಮಾಡಿದ್ದ. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ದೇಶ ಬಿಟ್ಟು ತೆರಳದಂತೆ ಆರೋಪಿ ವಿರುದ್ಧ ಲುಕ್‌ಔಟ್ ನೋಟಿಸ್ ಸಹ ನೀಡಲಾಗಿತ್ತು.
ಆರೋಪಿ ಶಂಕರ್ ಮಿಶ್ರಾನನ್ನು ಕಸ್ಟಡಿಗೆ ಪಡೆಯಲು ದೆಹಲಿ ಪೊಲೀಸರು ಯತ್ನಿಸಿದ್ದರು.ಆರೋಪಿಯ ತನಿಖೆ ನಡೆಸಲು ಮೂರು ದಿನ ತಮ್ಮ ಕಸ್ಟಡಿಗೆ ಒಪ್ಪಿಸಬೇಕು ಎಂದು ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದರು. ವಿಮಾನದ ಪೈಲಟ್‌ಗಳು, ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರು ಆರೋಪಿಯನ್ನು ಗುರುತಿಸುವ ಅಗತ್ಯವಿದೆ ಎಂದು ಪೊಲೀಸರು ಕೋರ್ಟ್‌ಗೆ ತಿಳಿಸಿದರು. ಆದರೆ ಇದಕ್ಕೆ ಕೋರ್ಟ್ ಒಪ್ಪಲಿಲ್ಲ. ಸಾಕ್ಷಿಗಳ ಹೇಳಿಕೆ ದಾಖಲಿಸಲು ಆರೋಪಿಯ ಪೊಲೀಸ್ ಕಸ್ಟಡಿ ಅಗತ್ಯವಿಲ್ಲ. ಆರೋಪಿಯ ಅನುಪಸ್ಥಿತಿಯಲ್ಲೂ ಹೇಳಿಕೆ ದಾಖಲಿಸಬಹುದು ಎಂದು ಮೆಟ್ರೊಪಾಲಿಟನ್ ನ್ಯಾಯಾಧೀಶರಾದ ಅನಾಮಿಕಾ ಅವರು ಸ್ಪಷ್ಟಪಡಿಸಿದರು.
ಆರೋಪಿಯು ತನಿಖೆಗೆ ಸಹಕರಿಸುತ್ತಿಲ್ಲ ಎಂಬುದು ಪ್ರಥಮಿಕವಾಗಿ ಕಾಣುತ್ತಿದೆ ಎಂಬ ಅಂಶವನ್ನು ಕೋರ್ಟ್ ಪರಿಗಣಿಸಿತು. ಈ ಪ್ರಕರಣದಲ್ಲಿ ಸಾರ್ವಜನಿಕ ವಲಯದಿಂದ ಒತ್ತಡವಿದೆ. ಈ ಕಾರಣಕ್ಕಾಗಿ ಪೊಲೀಸ್ ಕಸ್ಟಡಿಗೆ ಕೇಳಬೇಡಿ. ಕಾನೂನಿನ ಪ್ರಕಾರ ಹೋಗಿ ಎಂದು ಸೂಚನೆ ನೀಡಲಾಗಿದೆ.
Nandini and Amul| ನಂದಿನಿ ಮತ್ತು ಅಮುಲ್ ಬ್ರ್ಯಾಂಡ್ ವಿಲೀನಕ್ಕೆ ವಿರೋಧ
ಇನ್ನು ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಘಟನೆಯ ಕುರಿತಂತೆ ಏರ್ ಇಂಡಿಯಾ ವಿಮಾನದ ಮೂವರು ಸಿಬ್ಬಂದಿಯನ್ನು ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಶನಿವಾರ ವಿಚಾರಣೆಗೆ ಒಳಪಡಿಸಲಾಯಿತು.
ಒಂಬತ್ತು ಸಿಬ್ಬಂದಿಯನ್ನು ವಿಚಾರಣೆಗೆ ಕರೆಯಲಾಗಿತ್ತು. ಈ ಪೈಕಿ ಮೂವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎನ್ನಲಾಗಿದೆ.