1. ಸುದ್ದಿಗಳು

ಮಿದುಳು ಜ್ವರ; ರಾಜ್ಯದ 48 ಲಕ್ಷ ಮಕ್ಕಳಿಗೆ ಲಸಿಕೆ: ಡಾ.ಕೆ ಸುಧಾಕರ್‌

Hitesh
Hitesh
Vaccinate 48 lakh children of the state against encephalitis: Dr. K Sudhakara

ರಾಜ್ಯದಲ್ಲಿ ಮಿದುಳು ಜ್ವರ ತಡೆಗೆ ಸರ್ಕಾರ ಯೋಜನೆ ರೂಪಿಸಿಕೊಂಡಿದ್ದು, 1 ವರ್ಷದಿಂದ 15 ವರ್ಷದೊಳಗಿನ ಮಕ್ಕಳಿಗೆ ಜಿನವ್ಯಾಕ್‌ ಜೆಇ ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದೆ.  

ಚೀನಾದ ವುಹಾನ್‌ “ಪ್ರಯೋಗ”ದಿಂದಲೇ ಹರಡಿತಂತೆ ಕೊರೊನಾ ಮಹಾಮಾರಿ!

ಮಿದುಳು ಜ್ವರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು 1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಜೆನವ್ಯಾಕ್ ಜೆಇ ಲಸಿಕೆ

ಹಾಕಲು ಮುಂದಾಗಿದ್ದು, ಈ ಅಭಿಯಾನದ ಮೂಲಕ 48 ಲಕ್ಷ ಮಕ್ಕಳಿಗೆ ಆರೋಗ್ಯ ರಕ್ಷಣೆ ನೀಡಲು ಯೋಜನೆ ರೂಪಿಸಿಕೊಳ್ಳಲಾಗಿದೆ.  

38.30 ಲಕ್ಷ ಕೋಟಿ ಡಿಜಿಟಲ್ ಪಾವತಿ; ಚಿನ್ನ- ಬೆಳ್ಳಿ ದರ ತುಸು ಹೆಚ್ಚಳ!

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, ಮಿದುಳು ಜ್ವರವನ್ನು

ಜಪಾನೀಸ್ ಎನ್ಸೆಫಲೈಟಿಸ್’ (ಜೆಇ) ಪಿಡುಗು ಎಂದು ಗುರುತಿಸಲಾಗಿದೆ. ಇದು ಪ್ಲೇವಿವೈರಸ್ ವೈರಾಣುವಿನಿಂದ ಬರುತ್ತದೆ.

ಅಲ್ಲದೇ ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ ಎಂದರು.  

ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ  ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬಳ್ಳಾರಿ, ರಾಯಚೂರು,

ಕೊಪ್ಪಳ, ವಿಜಯಪುರ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯನ್ನು ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ.

Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!

ಈ ಜಿಲ್ಲೆಗಳಲ್ಲಿ ಮಕ್ಕಳಿಗೆ ಒಂಬತ್ತು ತಿಂಗಳು ತುಂಬಿದ ನಂತರ ಮೊದಲನೇ ಡೋಸ್, ಒಂದು ವರ್ಷದ ಬಳಿಕ ಎರಡನೇ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದರು.   

ಅಲ್ಲದೇ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನದಂತೆ ಹೆಚ್ಚುವರಿಯಾಗಿ ಹಾವೇರಿ,

ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ, ತುಮಕೂರು, ರಾಮನಗರ, ಗದಗ, ಹಾಸನ, ಉಡುಪಿ ಮತ್ತು ಯಾದಗಿರಿ

ಜಿಲ್ಲೆಯಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಈ ಅಭಿಯಾನದಲ್ಲಿ ಒಂದರಿಂದ ಹದಿನೈದು ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಡೋಸ್ ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.

Vaccinate 48 lakh children of the state against encephalitis: Dr. K Sudhakara

ಶಾಲೆಗಳಲ್ಲಿ ಲಸಿಕೆ ವಿತರಣೆ   

ಮಿದುಳು ಜ್ವರ ತಡೆ ಲಸಿಕೆಯನ್ನು ಶಾಲೆಗಳಲ್ಲಿಯೂ ನೀಡಲು ಉದ್ದೇಶಿಸಲಾಗಿದೆ.  ಡಿಸೆಂಬರ್ ಮೊದಲನೇ ವಾರ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಲಾಗುವುದು.

ನಂತರದ ಎರಡು ವಾರ ಎಲ್ಲ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರ ಹಾಗೂ ಸಮುದಾಯದ ಇನ್ನಿತರ ಪ್ರದೇಶಗಳಲ್ಲಿ ಲಸಿಕಾ ಅಭಿಯಾನಕ್ಕೆ

ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಸರ್ಕಾರ ಉಚಿತವಾಗಿ ‘ಜೆನವ್ಯಾಕ್ ಜೆಇ’ ಲಸಿಕೆಗಳನ್ನು ಸರಬರಾಜು ಮಾಡಿದೆ ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.  

ಅಲ್ಲದೇ ರೋಗ ಪತ್ತೆ ಮಾಡಲು ರಾಜ್ಯದಲ್ಲಿ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿಗಳನ್ನು (ಎಸ್ಎಸ್ಎಲ್)ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿರುವ ನಿಮ್ಹಾನ್ಸ್-ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ಬಳ್ಳಾರಿಯ ವಿಮ್ಸ್, ಹುಬ್ಬಳ್ಳಿಯ ಕಿಮ್ಸ್,

ಕೋಲಾರದ ಡಿಪಿಎಚ್ಎಲ್, ಉಡುಪಿಯ ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್ ಹಾಗೂ ಬೆಂಗಳೂರಿನ

ನ್ಯಾಷನಲ್ ಇನ್ಸ್‌ಟಿಟ್ಯೂಟ್‌ ಆಫ್ ವೈರಾಲಜಿ ಕೇಂದ್ರದಲ್ಲಿ ಪರೀಕ್ಷೆಗೆ ಕಾರ್ಯಯೋಜನೆ ರೂಪಿಸಿರುವುದಾಗಿ ತಿಳಿಸಿದರು.

Vaccinate 48 lakh children of the state against encephalitis: Dr. K Sudhakara

ದೇಶದ ವಿವಿಧೆಡೆ ಮಿದುಳು ಜ್ವರ ಪತ್ತೆ ವರದಿ!

ದೇಶದ ವಿವಿಧ ರಾಜ್ಯಗಳಲ್ಲಿ ಈ ಹಿಂದೆ ಮಿದುಳು ಜೆಇ ಮಿದುಳು ಜ್ವರದ ಮೊದಲ ಪ್ರಕರಣ 1955ರಲ್ಲಿ ತಮಿಳುನಾಡಿನ ವೆಲ್ಲೂರಿನಲ್ಲಿ ವರದಿಯಾಗಿತ್ತು.

ಕರ್ನಾಟಕದ ಕೋಲಾರದಲ್ಲಿ 1978ರಲ್ಲಿ ಈ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ವರದಿಯಾಗುತ್ತಿದೆ.

2016ರಲ್ಲಿ 11 ಪ್ರಕರಣಗಳು, 2017ರಲ್ಲಿ 23 ಪ್ರಕರಣಗಳು, 2018ರಲ್ಲಿ 35 ಪ್ರಕರಣಗಳು, 2019ರಲ್ಲಿ 33 ಪ್ರಕರಣಗಳು,

2020ರಲ್ಲಿ 19 ಪ್ರಕರಣಗಳು, 2021ರಲ್ಲಿ 25 ಪ್ರಕರಣಗಳು ಹಾಗೂ 2022ರಲ್ಲಿ 21 ಪ್ರಕರಣಗಳು ವರದಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.  

ಚಿನ್ನದ ಬೆಲೆಯಲ್ಲಿ ಅಲ್ಪ ಬದಲಾವಣೆ, ಇಂದಿನ ಚಿನ್ನದ ಬೆಲೆ ಎಷ್ಟಿದೆ ?

Published On: 06 December 2022, 02:33 PM English Summary: Vaccinate 48 lakh children of the state against encephalitis: Dr. K Sudhakara

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.