ಇದೇ ಅಕ್ಟೋಬರ್ 1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಏರ್ಪಡಿಸಲಾಗುತ್ತಿದ್ದು, ಇದಕ್ಕಾಗಿ ಆಸಕ್ತಿಯುಳ್ಳ ಅರ್ಹ ಹಿರಿಯ ನಾಗರಿಕರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕೆಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾಧಿಕ್ ಹುಸೇನ್‌ಖಾನ್ ಅವರು ತಿಳಿಸಿದ್ದಾರೆ.
ಹಿರಿಯ ನಾಗರಿಕರಿಗೆ ಇದೇ ಸೆಪ್ಟೆಂಬರ್ 20 ರಂದು ಕಲಬುರಗಿ ನಗರದ ಶ್ರೀ ಚಂದ್ರ ಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದ್ದು, ಹಿರಿಯ ನಾಗರಿಕರಿಗೆ ಏರ್ಪಡಿಸಲಾಗುವ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿವರ ಕೆಳಕಂಡಂತೆ ಇರುತ್ತದೆ.
ಸಾಂಸ್ಕೃತಿಕ ಸ್ಪರ್ಧೆಗಳು: (ಪುರುಷ/ಮಹಿಳೆ) ವಯಸ್ಸಿನ ಮಿತಿ (60-69, 70-79, 80ವರ್ಷ ಮೇಲ್ಪಟ್ಟು) ಏಕಪಾತ್ರ ಅಭಿನಯ, ಗಾಯನ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆಗಳು.
ಕ್ರೀಡಾ ಸ್ಪರ್ಧೆಗಳು: (ಪುರುಷ/ಮಹಿಳೆ) ವಯಸ್ಸಿನ ಮಿತಿ(60-69, 70-79, 80ವರ್ಷ ಮೇಲ್ಪಟ್ಟು) ನಡಿಗೆ, ರಿಂಗನ್ನು ಬಕೇಟ್‌ನಲ್ಲಿ ಎಸೆಯುವುದು, ಕೇರಂ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ.
ಹಿರಿಯ ನಾಗರಿಕರು 60 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿರಬೇಕು ಹಾಗೂ ವಯಸ್ಸಿನ ಧೃಢಿಕರಣಕ್ಕೆ ಸಂಬಂದಿಸಿದಂತೆ ಅಗತ್ಯದಾಖಲೆಯನ್ನು ಸಲ್ಲಿಸಬೇಕು. ಹಿರಿಯ ನಾಗರಿಕರ ಆರೋಗ್ಯದ ಹಿತದೃಷ್ಠಿಯಿಂದ ಕಡ್ಡಾಯವಾಗಿ ಕೋವಿಡ್ ಎರಡು ಡೋಸ್ ಲಸಿಕೆ ಪಡೆದಿರಬೇಕು. ಈ ಕುರಿತು ಆನ್‌ಲೈನ್‌ದಿಂದ ಪಡೆದ ಪ್ರಮಾಣ ಪತ್ರವನ್ನು ಅಥವಾ ಲಿಖಿತವಾಗಿ ಸ್ವಯಂ ಧೃಢಿಕರಣ ಪತ್ರ ಸಲ್ಲಿಸಬೇಕು. ಹಿರಿಯ ನಾಗರಿಕರು ತಮ್ಮ ಹೆಸರುಗಳನ್ನು ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆಯೊAದಿಗೆ ನೋಂದಾಯಿಸಿಕೊಳ್ಳಬೇಕು.
ಆಸಕ್ತ ಅರ್ಹ ಹಿರಿಯ ನಾಗರಿಕರು ಅವಶ್ಯಕ ದಾಖಲಾತಿಗಳೊಂದಿಗೆ ತಮ್ಮ ಹೆಸರುಗಳನ್ನು 2021ರ ಸೆಪ್ಟೆಂಬರ್ 18 ರ ಸಂಜೆ 5.30ರ ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿ ಇದರಲ್ಲಿ ಪ್ರಥಮವಾಗಿ ವಿಜೇತರಾದ ಹಿರಿಯ ನಾಗರಿಕರನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸಲಾಗುವ ಸ್ಪರ್ಧೆಗಳಿಗೆ ಕಳುಹಿಸಿಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ದೂರವಾಣಿ ಸಂಖ್ಯೆ: 08472-235222 ಹಾಗೂ ಕಚೇರಿಯ ಸಿಬ್ಬಂದಿ ಅಮರೇಶ್ ಮೊಬೈಲ್ ಸಂಖ್ಯೆ 8549852750 ಅಥವಾ ದೈಹಿಕ ಶಿಕ್ಷಕ ಪ್ರಕಾಶ ಭಜಂತ್ರಿ ಇವರ ಮೊಬೈಲ್ ಸಂಖ್ಯೆ 9686363287 ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.