ರಾಜ್ಯದಲ್ಲಿ ಹೊಸ ವರ್ಷದ ಮೊದಲ ದಿನದಿಂದಲೇ ಪರಿಷ್ಕೃತ ರೂಪದ ವಿದ್ಯಾಗಮ ಕಾರ್ಯಕ್ರಮ ಜಾರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಸರ್ಕಾರಿ ಶಾಲಾ ಮಕ್ಕಳ ನಿರಂತರ ಕಲಿಕೆಗೆ ಪೂರಕವಾಗಿರುವ 'ವಿದ್ಯಾಗಮ’ ಯೋಜನೆ ಇದಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ‘ಕೊರೊನಾ ಕಾರಣದಿಂದ ಶಾಲೆಗಳು ಆರಂಭವಾಗದೇ ಇರುವುದರಿಂದ ‘ವಿದ್ಯಾಗಮ’ ಕಾರ್ಯಕ್ರಮವನ್ನು ಮತ್ತೆ ಅನುಷ್ಠಾನ ಮಾಡಲಾಗುತ್ತಿದೆ.
ಈ ಸಂಬಂಧ ಸರ್ಕಾರ, ರೂಪರೇಷೆ ಹಾಗೂ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ. ಹೀಗಾಗಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಜ.1 ರಿಂದ ಕಾರ್ಯಕ್ರಮವನ್ನು ಆರಂಭಿಸಲು ಪೂರ್ವ ತಯಾರಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ನಿರ್ದೇಶನ ನೀಡಿದೆ.
ಮಕ್ಕಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಕಲಿಕೆಯ ನಿರಂತರತೆ ದೃಷ್ಟಿಯಿಂದ ಪರಿಷ್ಕೃತ ರೂಪದ ವಿದ್ಯಾಗಮ ಜ. 1 ರಿಂದ ಜಾರಿಗೆ ಬರಲಿದೆ.
ವಿದ್ಯಾಗಮ ಅನುಷ್ಠಾನ ಸಂಬಂಧ ಮಾರ್ಗದರ್ಶಿ ಶಿಕ್ಷಕರು ಪ್ರತಿದಿನ ಅಥವಾ ವಾರಕ್ಕೆ ಒಮ್ಮೆಯಾದರೂ ಮಕ್ಕಳನ್ನು ಭೇಟಿಯಾಗೆ ಮುಂದಿನ ವಾರದ ವೇಳಾಪಟ್ಟಿ ನೀಡಬೇಕು. ವಿದ್ಯಾರ್ಥಿಗಳಿಗೆ ಲಭ್ಯವಿರುವ ಸಲಕರಣೆಗಳ ಮೂಲಕ (ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್) ಮೂಲಕ ಪರಿಣಾಮಕಾರಿಯಾಗಿ ಬೋಧನೆ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ.
Share your comments