1. ಸುದ್ದಿಗಳು

ಮುಖ್ಯಮಂತ್ರಿ ವಿದ್ಯಾನಿಧಿ ಸ್ಕಾಲರ್‌ಶಿಪ್‌: ರೈತರ ಮಕ್ಕಳಿಗೆ ಬರೋಬ್ಬರಿ 600 ಕೋಟಿ ನೆರವು

Maltesh
Maltesh
Vidyanidhi Scholarship: Rs 600 crore for farmers' children

ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆಯಯಲ್ಲಿ ಇಲ್ಲಿಯವರೆಗೆ  14 ಲಕ್ಷ ಮಕ್ಕಳಿಗೆ 600 ಕೋಟಿ ರೂಪಾಯಿಯನ್ನು ಮಂಜೂರು ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು  ಈ ಯೋಜನೆಯ ಜೊತೆ ಜೊತೆಗೆ  ರೈತರ ಮಕ್ಕಳಿಗೆ ಕೃಷಿ ಸಂಬಂಧಿತ ಶಿಕ್ಷಣದಲ್ಲಿ ಮೀಸಲಾತಿಯಲ್ಲಿಯೂ  ನೆರವು ನೀಡಲಾಗಿದೆ ಎಂದು ತಿಳಿಸಿದರು.

Bank Holidays: ಅಕ್ಟೋಬರ್‌ ತಿಂಗಳಲ್ಲಿ ಬ್ಯಾಂಕ್‌ಗಳಿಗೆ ಎಷ್ಟು ದಿನ ರಜೆಗಳಿವೆ ಗೊತ್ತಾ..?

ಏನಿದು ವಿದ್ಯಾನಿಧಿ ಯೋಜನೆ..?

ಈ ಯೋಜನೆಯಡಿ 8, 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳು ಮತ್ತು 10 ನೇ ತರಗತಿಯನ್ನು ಪೂರೈಸಿರುವ ಹಾಗೂ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆ/ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರು ಇರುತ್ತಾರೆ.

ವಿದ್ಯಾರ್ಥಿ ವೇತನವನ್ನು ವಾರ್ಷಿಕವಾಗಿ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ ವರ್ಗಾಯಿಸಲಾಗುವುದು. ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನವನ್ನು ಅರ್ಹತೆ ಆಧಾರದ ಮೇಲೆ ಮತ್ತು ಅರ್ಜಿ ಎರಡರ ಆಧಾರದ ಮೇಲೆ ನೀಡಲಾಗುತ್ತಿದೆ. ಇ -ಆಡಳಿತ ಇಲಾಖೆಯು ನಿರ್ವಹಿಸುತ್ತಿರುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಿಂದ ಕೃಷಿ ಇಲಾಖೆಗೆ ಅರ್ಹ ವಿದ್ಯಾರ್ಥಿಗಳ ದಾಖಲಾತಿಗಳನ್ನು ವಿದ್ಯಾರ್ಥಿ ವೇತನ ವರ್ಗಾವಣೆಗಾಗಿ  ನೀಡಲಾಗುತ್ತಿದೆ

LPG Price: ಗ್ರಾಹಕರಿಗೆ ಹಬ್ಬದ ಗಿಫ್ಟ್‌..LPG ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ

ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಮಾಡುವಂತಹ ಕೃಷಿ ಜಮೀನನ್ನು ತನ್ನ ಹೆಸರಿನಲ್ಲಿ ಹೊಂದಿರುವಂತಹ ವ್ಯಕ್ತಿ

ರೈತರ ಮಕ್ಕಳು ಎಂದರೆ ಕಾನೂನಿನ ಪ್ರಕಾರ ದತ್ತು ಪಡೆದಿರುವ ಮಕ್ಕಳು ಸೇರಿದಂತೆ ಪೋಷಕ/ಪೋಷಕರ ಜೈವಿಕ ಸಂತತಿ.

ಒಂದು ಪಕ್ಷ ಯಾವುದೇ ಮಕ್ಕಳಿಗೆ ಪೋಷಕ /ಪೋಷಕರು ಇಲ್ಲದೆ ಇದ್ದ ಸಂದರ್ಭದಲ್ಲಿ ಉಳಿಮೆ ಮಾಡುವಂತಹ/ ಕೃಷಿ ಮಾಡುವಂತಹ ಜಮೀನನ್ನು ಅವರು ಹೊಂದಿರತಕ್ಕದ್ದು

ರೈತ ಕುಟುಂಬದ ಎಲ್ಲಾ ಮಕ್ಕಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುತ್ತಾರೆ. ಸದರಿ ಉದ್ದೇಶಕ್ಕೆ ರೈತ ಕುಟುಂಬ ಎಂದರೆ ರಾಜ್ಯದ ಇ-ಆಡಳಿತ ಇಲಾಖೆಯು ನಿರ್ವಹಿಸುತ್ತಿರುವ ಕುಟುಂಬ ತಂತ್ರಾಂಶದ ದತ್ತಾಂಶದಲ್ಲಿ ದಾಖಲಾಗಿರುವ ಸದಸ್ಯರು

ವಿದ್ಯಾರ್ಥಿಯು ಇತರೆ ಯಾವುದೇ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರು ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುತ್ತಾರೆ.

ಇದನ್ನೂ ಓದಿರಿ: ರೈತರೇ ಗಮನಿಸಿ: ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಕೆಗೆ ಅ.20 ಕೊನೆ ದಿನ..

ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ವಿತರಿಸುವ ಉದ್ದೇಶಕ್ಕೆ ರಾಜ್ಯದ ವಿವಿಧ ಇಲಾಖೆಗಳು ನಿರ್ವಹಿಸುತ್ತಿರುವ ಶೈಕ್ಷಣಿಕ ಹಾಗೂ ಇತರೆ ದತ್ತಾಂಶದ ಆಧಾರದ ಮೇಲೆ ಗುರುತಿಸಿ ವಿದ್ಯಾರ್ಥಿ ವೇತನವನ್ನು ವಿತರಿಸುವುದು

ಹಾಗೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಪ್ರಕರಣಗಳನ್ನು ಸಹ ಪರಿಗಣಿಸಿ ಅರ್ಹರಿಗೆ ವಿದ್ಯಾರ್ಥಿವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವರ್ಗಾಯಿಸಲಾಗುವುದು.

ಪುನರಾವರ್ತಿತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುವುದಿಲ್ಲ ರೈತರ ಮಕ್ಕಳು (https://ssp.postmatric.karnataka.gov.in) ಇಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

ವಿದ್ಯಾರ್ಥಿಯು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮತ್ತು  NPCI Mapping ಮಾಡಿಸಿರಬೇಕು ಹಾಗೂ ತಂದೆ ಅಥವಾ ತಾಯಿಯ ರೈತರ ಗುರುತಿನ ಸಂಖ್ಯೆ(FID)ಹೊಂದಿರಬೇಕು 

Published On: 03 October 2022, 01:56 PM English Summary: Vidyanidhi Scholarship: Rs 600 crore for farmers' children

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.