1. ಸುದ್ದಿಗಳು

ಬಳ್ಳಾರಿ ಇಬ್ಬಾಗ- ವಿಜಯನಗರ ಜಿಲ್ಲೆ ಉದಯ-31ನೇ ಜಿಲ್ಲೆ ರಚನೆಗೆ ರಾಜ್ಯ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ

ಗಣಿನಾಡು ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಜಿಲ್ಲೆರಚಿಸುವ ಪ್ರಕ್ರಿಯೆಗೆ ಕೊನೆಗೂ ಸರ್ಕಾರದಿಂದ ಬುಧವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದರಿಂದ ದಶಕಗಳ ಹೋರಾಟಕ್ಕೆ ಮೊದಲ ಜಯ ಸಿಕ್ಕಂತಾಗಿದೆ, ಇದು ರಾಜ್ಯದ 31ನೇ ಜಿಲ್ಲೆಯಾಗಲಿದ್ದು, ಇದಕ್ಕೆ ಯಾವ ಯಾವ ತಾಲ್ಲೂಕುಗಳನ್ನು ಸೇರಿಸಬೇಕು ಹೊಸ ಜಿಲ್ಲೆಯ ಭೌಗೋಳಿಕ ನಕ್ಷೆ  ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನಿಸಿ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಈ ವಿಷಯ ಹೊರಬೀಳುತ್ತಿದ್ದಂತೆ ಹೊಸಪೇಟೆಯಲ್ಲಿ ಜನ ಸಂಭ್ರಮಿಸಿದರೆ ಬಳ್ಳಾರಿಯಲ್ಲಿ ವಿರೋಧ ವ್ಯಕ್ತವಾಗಿದೆ.

 ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ರಚಿಸಲು ಬುಧವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟದಲ್ಲಿ ಒಮ್ಮತದ ಒಪ್ಪಿಗೆ ಸಿಕ್ಕಿದೆ. ವಿಜಯನಗರ ಜಿಲ್ಲೆ ಸ್ಥಾಪನೆಗಾಗಿ ಹಲವು ದಶಕಗಳಿಂದ ಪಕ್ಷಾತೀತ ಹೋರಾಟ ನಡೆದಿತ್ತು. ಇದು ಜಿಲ್ಲಾ ಕೇಂದ್ರವಾಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿತ್ತು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಐತಿಹಾಸಿಕ ನಿರ್ಧಾರ ತೆಗೆದು ಕೊಂಡಿದ್ದಾರೆ. ಜಿಲ್ಲೆಯ ವಿಭಜನೆಗೆ ಕೆಲವರ ವಿರೋಧವಿತ್ತು. ಅಂತಿಮವಾಗಿ ಎಲ್ಲರ ವಿಶ್ವಾಸವನ್ನು ತೆಗೆದುಕೊಂಡೇ ಈ ನಿರ್ಣಯ ತೆಗೆದುಕೊಳ್ಳಲಾಯಿತು’ ಎಂದು  ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ರಚನೆ ಬೇಡಿಕೆ ಮುಂದಿಟ್ಟು ಹೋರಾಟ ನಡೆದಿತ್ತು. ಈ ವಿಚಾರದಲ್ಲಿ ಕೆಲವು ಸಂದರ್ಭಗಳಲ್ಲಿ ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಅಂತಿಮವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಲಾಗಿದೆ.  ವಿಜಯನಗರ ಜಿಲ್ಲೆ ರಚಿಸಲು ಕೈಗೊಂಡ ತೀರ್ಮಾನವು ಆಡಳಿತಾತ್ಮಕವಾಗಿ ಉತ್ತಮ ನಿರ್ಧಾರ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

Published On: 19 November 2020, 08:20 AM English Summary: vijayanagara to become Karnataka 31st district

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.