ಪ್ರಸ್ತುತ ಹವಾಮಾನ ಇಲಾಖೆಯ ಪ್ರಕಾರ ಇದೇ ಜುಲೈ 8 ರಿಂದ 15ರವರೆಗೆ ಗಂಡೋರಿನಾಲಾ ಯೋಜನೆ ಜಲಾಶಯದ ಪ್ರದೇಶದಲ್ಲಿ ಭಾರಿ ಮಳೆಯಾಗಲಿದ್ದು, ಸದ್ಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಣೆಕಟ್ಟಿನಲ್ಲಿ ಪ್ರತಿಶತ 79.66 ರಷ್ಟು ನೀರು ಸಂಗ್ರಹವಾಗಿದೆ. ಹೆಚ್ಚಿನ ಒಳಹರಿವು ಬಂದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಆಣೆಕಟ್ಟಿನ ಸುರಕ್ಷತೆ ಮತ್ತು ಪ್ರವಾಹ ನಿಯಂತ್ರಣಕ್ಕಾಗಿ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ. 1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಆದ್ದರಿಂದ ನದಿ ಪ್ರವಾಹದಿಂದ ನದಿ ಪಾತ್ರದ ಗ್ರಾಮಗಳಾದ ಕುರಿಕೋಟಾ, ಮಹಾಗಾಂವ ಹಾಗೂ ದಸ್ತಾಪೂರ ಗ್ರಾಮಗಳು ತೊಂದರೆ ಉಂಟಾಗಬಹುದಾಗಿದೆ. ಪ್ರಯುಕ್ತ ನದಿಯ ಅಕ್ಕಪಕ್ಕದ ರೈತರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದು, ಬಟ್ಟೆ ಒಗೆಯುವುದು, ದನಕರುಗಳಿಗೆ ನೀರು ಕುಡಿಸಲು ಹಾಗೂ ಇನ್ನಿತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು. ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೆ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಅಮರ್ಜಾ ಯೋಜನೆಯ ಆಣೆಕಟ್ಟಿನಿಂದ ನದಿಗೆ ನೀರು ಬಿಡುಗಡೆ: ನದಿಯ ಅಕ್ಕಪಕ್ಕದ ಜನರು ಎಚ್ಚರಿಕೆಯಿಂದಿರಲು ಸೂಚನೆ
ಪ್ರಸ್ತುತ ಹವಾಮಾನ ಇಲಾಖೆಯ ಪ್ರಕಾರ ಜುಲೈ 8 ರಿಂದ 15ರವರೆಗೆ ಅಮರ್ಜಾ ಯೋಜನೆ ಜಲಾಶಯದ ಪ್ರದೇಶದಲ್ಲಿ ಭಾರಿ ಮಳೆಯಾಗಲಿದ್ದು, ಸದ್ಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಣೆಕಟ್ಟಿನಲ್ಲಿ ಪ್ರತಿಶತ 64.80 ರಷ್ಟು ನೀರು ಸಂಗ್ರಹವಾಗಿದೆ. ಹೆಚ್ಚಿನ ಒಳಹರಿವು ಬಂದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಆಣೆಕಟ್ಟಿನ ಸುರಕ್ಷತೆ ಮತ್ತು ಪ್ರವಾಹ ನಿಯಂತ್ರಣಕ್ಕಾಗಿ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ. 1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ನದಿ ಪ್ರವಾಹದಿಂದ ನದಿ ಪಾತ್ರದ ಗ್ರಾಮಗಳಾದ ಭೂಸನೂರ, ಕೋರಳ್ಳಿ, ದೇವಂತಗಿ, ಜವಳಿ(ಡಿ), ಹಿತ್ತಲಶಿರೂರ ಹಾಗೂ ಕುಡಕಿ ಗ್ರಾಮಗಳು ತೊಂದರೆ ಉಂಟಾಗಬಹುದಾಗಿದೆ. ಆದ್ದರಿಂದ ನದಿಯ ಅಕ್ಕಪಕ್ಕದ ರೈತರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದು, ಬಟ್ಟೆ ಒಗೆಯುವುದು ಹಾಗೂ ದನಕರುಗಳಿಗೆ ನೀರು ಕುಡಿಸಲು ಹಾಗೂ ಇನ್ನೀತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು. ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೆ ಇಲಾಖೆಗಳಿಗೆ ಸಂಬಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಕೆಳದಂಡೆ ಮುಲ್ಲಾಮಾರಿ ಆಣೆಕಟ್ಟಿನಿಂದ ನದಿಗೆ ನೀರು ಬಿಡುಗಡೆ: ನದಿಯ ಅಕ್ಕಪಕ್ಕದ ಜನರು ಎಚ್ಚರಿಕೆಯಿಂದಿರಲು ಸೂಚನೆ
ಪ್ರಸ್ತುತ ಹವಾಮಾನ ಇಲಾಖೆಯ ಪ್ರಕಾರ ಇದೇ ಜುಲೈ 8 ರಿಂದ 15ರವರೆಗೆ ಕೆಳದಂಡೆ ಮುಲ್ಲಾಮಾರಿ ಯೋಜನೆ ಜಲಾಶಯದ ಪ್ರದೇಶದಲ್ಲಿ ಭಾರಿ ಮಳೆಯಾಗಲಿದ್ದು, ಸಧ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಮಾರು 250 ಕ್ಯೂಸೆಕ್ಸ ಒಳಹರಿವು ಇರುತ್ತದೆ. ಆಣೆಕಟ್ಟಿನಲ್ಲಿ ಪ್ರತಿಶತ 72.80 ರಷ್ಟು ನೀರು ಸಂಗ್ರಹವಾಗಿದೆ. ಆಣೆಕಟ್ಟಿನ ಸುರಕ್ಷತೆ ಮತ್ತು ಪ್ರವಾಹ ನಿಯಂತ್ರಿಸಲು ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ. 1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ಒಳಹರಿವು ಬಂದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಬಿಡಲಾಗುತ್ತದೆ. ನದಿ ಪ್ರವಾಹದಿಂದ ನದಿ ಪಾತ್ರದ ಗ್ರಾಮಗಳಾದ ಚಿಮ್ಮನಚೋಡ, ತಾಜಲಾಪೂರ, ಕನಕಪೂರ, ಗಾರಂಪಳ್ಳಿ, ದೇಗಲಮಡಿ, ನೀಮಹೊಸಳ್ಳಿ, ಚಿಂಚೋಳಿ ಹಾಗೂ ಅನವಾರ ಗ್ರಾಮಗಳಿಗೆ ತೊಂದರೆ ಉಂಟಾಗಬಹುದಾಗಿದೆ. ಆದ್ದರಿಂದ ನದಿಯ ಅಕ್ಕ ಪಕ್ಕದ ರೈತರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದು, ಬಟ್ಟೆ ಒಗೆಯುವುದು, ದನಕರುಗಳಿಗೆ ನೀರು ಕುಡಿಸುವುದು ಸೇರಿದಂತೆ ಇನ್ನಿತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು. ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೆ ಇಲಾಖೆಗಳಿಗೆ ಸಂಬಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.