ಕಲಬುರಗಿ ಜಿಲ್ಲೆಯ ಕೆಳದಂಡೆ ಮುಲ್ಲಾಮಾರಿ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸುಮಾರು 300 ಕ್ಯೂಸೆಕ್ಸ್ ಒಳಹರಿವು ಇದ್ದು, ಆಣೆಕಟ್ಟಿನ ಸುರಕ್ಷತೆ ಮತ್ತು ಪ್ರವಾಹ ನಿಯಂತ್ರಣಕ್ಕಾಗಿ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಇನ್ನೂ ಹೆಚ್ಚಿನ ಒಳಹರಿವು ಬಂದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐ.ಪಿ.ಸಿ. ವಿಭಾಗ ನಂ.1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಆದ್ದರಿಂದ ನದಿಪಾತ್ರದ ಚಿಮ್ಮನಚೋಡ, ತಾಜಲಾಪುರ, ಕನಕಪುರ, ಗಾರಂಪಳ್ಳಿ, ದೇಗಲಮಡಿ, ನೀಮಹೊಸಳ್ಳಿ ಮತ್ತು ಚಿಂಚೋಳಿ, ಅನವಾರ ಗ್ರಾಮಗಳು ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ಆದ್ದರಿಂದ ನದಿಯ ಅಕ್ಕಪಕ್ಕದ ರೈತರು/ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದಾಗಲಿ, ಬಟ್ಟೆ ಒಗೆಯುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನೀತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು. ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೆ ಇಲಾಖೆಗಳಿಗೆ ಸಂಬAಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಹಿಪ್ಪರಗಿ ಜಲಾಶಯದ ಒಳಹರಿವು 97000 ಕ್ಯೂಸೆಕ್
ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ 97000 ಕ್ಯೂಸೆಕ್ ನೀರು ಹರಿದು ಬಂದಿದೆ. ಹೊರ ಹರಿವು 96 ಸಾವಿರ ಕ್ಯೂಸೆಕ್ ಇದೆ. ಜಲಾಶಯದಲ್ಲಿ ನೀರಿನ ಮಟ್ಟ 521 ಮೀಟರ್ ಇದೆ. ಮುಂದಿನ ದಿನಗಳಲ್ಲಿ ನದಿಯೂ ಅಪಾಯಮಟ್ಟ ಮೀರಿ ಹರಿಯುವ ಸಾಧ್ಯತೆಯಿರುವುದರಿಂದ ನದಿ ಪಾತ್ರದ ಜನರು, ತಮ್ಮ ಪಾತ್ರೆ ಹಾಗೂ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ತಹಸೀಲ್ದಾರ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ –ಉಕ್ಕಿ ಹರಿಯುತ್ತಿದೆ ಘಟಪ್ರಭೆ
ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯದಿದ್ದರೂ ಪಕ್ಕದ ಬೆಳಗಾವಿ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಘಟಪ್ರಭಾ ಮತ್ತು ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.
Share your comments