News

Weather Alert ಭಾರೀ ಮಳೆ ಮುನ್ನೆಚ್ಚರಿಕೆ

31 May, 2023 11:44 AM IST By: Maltesh
Weather Alert Heavy rain warning

01 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ.

ಮುಂದಿನ 24 ಘಂಟೆಗಳು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಮುಂದಿನ 24 ಘಂಟೆಗಳು: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 40 ರಿಂದ 50 ಕಿ.ಮೀ. ಇರುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ

ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಒಂದೆರಡು ಸಲ ಬಲವಾದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಒಂದೆರಡು ಸಲ ಬಲವಾದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.