News

ಇಂದಿನಿಂದ ವಿವಿಧೆಡೆ ಐದು ದಿನಗಳ ಕಾಲ ಮಳೆಯ ಮುನ್ಸೂಚನೆ

08 April, 2021 2:32 PM IST By:
rain alert

ರಾಜ್ಯದಲ್ಲಿ ಏಪ್ರೀಲ್ 8 ರಿಂದ 12 ರವರೆಗೆ ರಾಜ್ಯದ 16 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರೀಲ್ 8 ರಿಂದ 12 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಂಗಳೂರು, ಹಾಸನ,ಕೊಡಗು, ಮೈಸೂರು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಏಪ್ರೀಲ್ 11 ಹಾಗೂ 12 ರಂದು ಬೆಳಗಾವಿ, ಬೀದರ್, ಬಿಜಾಪುರ, ಬೆಳಗಾವಿ,ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದರೆ ಏಪ್ರೀಲ್ 8 ರಂದು ಕಲಬುರಗಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ, ತಣ್ಣನೆಯೆ ಗಾಳಿ ಬಿಸಲಿದೆ.

ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಆಗಾಗ ತುಂತುರು ಮಳೆಯಾಗುವ ಇಲ್ಲವೆ ಗಾಳಿ ಸಮೇತ ಕೆಲ ನಿಮಿಷಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಚಿತ್ರದುರ್ಗ, ಹಾಸನ , ಕೊಡಗು, 13 ಮತ್ತು 4 ರಂದು ಮೋಡ ಕವಿದ ವಾತಾವರಣ ಇರಲಿದೆ. ಯಾದಗಿರಿ, ಬಳ್ಳಾರಿ, ರಾಯಚೂರು, ವಿಜಯಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಯಾವುದೇ ಮಳೆಯಾಗುವ ಮುನ್ಸೂಚನೆಯಿಲ್ಲ. ಒಣಹವೆ ಮುಂದುವರೆಯಲಿದೆ.