ರಾಜ್ಯದಲ್ಲಿ ಏಪ್ರೀಲ್ 22 ರವರೆಗೆ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರೀಲ್ 18 ರಿಂದ 22 ರವರೆಗೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಏಪ್ರೀಲ್ 18 ರಿಂದ 20 ರವರೆಗೆ ಸಾಧಾರಣ ಮಳೆಯಾಗಲಿದೆ. ಏಪ್ರಿಲ್ 22ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮೋಡ ಕವಿದ ವಾತಾವರಣದೊಂದಿದೆ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ. . ಬೆಂಗಳೂರಿನಲ್ಲಿ ವಾತಾವರಣ ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಮುಂದುವರೆಯಲಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 40.25 ಮಿ.ಮೀ ರಷ್ಟು ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಸರಾಸರಿ 16.07 ಮಿಮೀ, ವಿರಾಜಪೇಟ ತಾಲೂಕಿನಲ್ಲಿ ಸರಾಸರಿ 12.75 ಮಿ.ಮೀ, ಸೋಮವಾರಪೇಟ ತಾಲೂಕಿನಲ್ಲಿ ಸರಾಸರಿ 12. ಮಿ.ಮೀ ಮಳೆಯಾಗಿದೆ.
ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಇಳಿಕೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.