News

ಇಂದು ಮತ್ತು ಮೇ 12 ರಂದು ರಾಜ್ಯದಲ್ಲಿ ಮಳೆಯ ಮುನ್ಸೂಚನೆ

08 May, 2021 1:50 PM IST By:
rain

ಹವಾಮಾನ ವೈಪರೀತ್ಯದಿಂದಾಗಿ ಇಂದು (ಮೇ 7ರಂದು)   ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವೆಡೆ ಸಾಧಾರಣ ಮಳೆಯಾಗಬಹುದು’ ಎಂದು ಮಾಹಿತಿ ನೀಡಿದೆ.

ಕಳೆದ ಐದಾರು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಸುರಿದ ಮಳೆ ಬೆಳೆಗೆ ಹಾನಿಯನ್ನುಂಟು ಮಾಡಿದೆ. ಶುಕ್ರವಾರ ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಬಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಮೇ 12 ರಂದು ರಾಜ್ಯದ ಆರು ಜಿಲ್ಲೆಗಳಲ್ಲಿ ಮಳೆ

ಇತ್ತೀಚೆಗೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಒಂದೆಡೆ  ಬೆಳೆ ಹಾನಿಯಾಗಿದರೆ ಮತ್ತೊಂದೆಡೆ ಬೆಳೆಗಳಿಗೆ ಅನುಕೂಲವೂ ಆಗಿದೆ. ರಾಜ್ಯದಲ್ಲಿ ಮತ್ತೇ ಮೇ 12 ರಂದು ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಚಿತ್ರದುರ್ಗದಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಯೂ ಸಹ ಮಳೆಯಾಗಲಿದೆ. ಮುಂದಿನ 48 ಗಂಟೆ ರಾಜ್ಯಾದ್ಯಂತ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ.