News

WEATHER FORECAST: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಮಳೆಯ ಮುನ್ಸೂಚನೆ ಹೇಗಿರಲಿದೆ?

22 April, 2023 11:38 AM IST By: Maltesh
Rainfall forecast in the state for the next 48 hours

ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು ರಾಜ್ಯದ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತಿಐ ಹವಾಮಾನ ಇಲಾಖೆ ಅಂದಾಜಿಸಿದೆ.

ಉತ್ತರ ಒಳನಾಡಿನ ಈ ಭಾಗಗಳಲ್ಲಿ ಒಣಹವೆ ನೀರಿಕ್ಷೆ!

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ; ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ವಿಜಯನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳ ಕಾಲ ಈ ಜಿಲ್ಲೆಗಳಲ್ಲಿ ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ವಿಜಯನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಎಚ್ಚರಿಕೆ :

ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ಮತು ಸುತಮುತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ರಾಜ್ಯ ರಾಜಧಾನಿಯಲ್ಲಿ ಸ್ವಲ್ಪ ಮೋಡ ಕವಿದ ವಾತಾವರಣವಿರುವ ಸಂಭವವಿದೆ. ಸಂಜೆ/ರಾತ್ರಿಯ ವೇಳೆಗೆ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶ: ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

Heatwave alert: ರಾಜ್ಯದಲ್ಲಿ ಹೆಚ್ಚಾಗಲಿದೆ ತಾಪಮಾನ: ತಜ್ಞರಿಂದ 40 ಡಿಗ್ರಿ ದಾಟುವ ಸೂಚನೆ!