ಸುಡು ಬಿಸಿಲಿನ ನಡುವೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಯಾ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಲಿದೆ. ಎಲ್ಲಾ ತಾಲೂಕಿನಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ.
ಹೌದು ಉತ್ತರ ಕನ್ನಡದ ಕೆಲವು ಭಾಗ, ದಕ್ಷಿಣ ಕನ್ನಡ ಜಿಲ್ಲೆ, , ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ .
ಮಳೆಯ ನಂತರ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ ಉಂಟಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ತಾಪಮಾನ ಎಂದಿನಂತೆ ಏರಲಿದೆ.