ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಅ.25ರಂದು (ಭಾನುವಾರ) ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.
ನವರಾತ್ರಿ ಹಬ್ಬವನ್ನಾದರೂ ಸರಳವಾಗಿ ಶಾಂತವಾಗಿ ಆಚರಿಸಲು ಸಿದ್ದಗೊಂಡ ಜನರಿಗೆ ಮಳೆ ಸುರಿಯುವ ಸಾಧ್ಯತೆಯಿರುವುದರಿಂದ ಆತಂಕ ಎದುರಾಗಿದೆ. ಆಯುಧಪೂಜೆ, ವಿಜಯದಶಮಿ ಹಬ್ಬದ ದಿನವೂ ಮಳೆಯಾಗುವ ಮುನ್ಸೂಚನೆಯಿದೆ.