ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 23ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ವಾರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ತತ್ತರಿಸಿ ಹೋಗಿದ್ದವು. ಮಹಾರಾಷ್ಟ್ರದಲ್ಲಿಯೂ ಮಳೆಯಿಂದಾಗಿ ಪ್ರವಾಹ ಉಂಟಾಗಿ ಹಲವಾರು ಗ್ರಾಮಗಳು ಜಲಾವೃತ್ತವಾಗಿತ್ತು. ಈಗ ಮತ್ತೇ ಮಳೆಯಾದರೆ ಇನ್ನೂ ಆತಂಕ ಎದುರಾಗುವ ಸಾಧ್ಯತೆಯಿದೆ.
ಇದೇ 20ರಿಂದ 22ರವರೆಗೆ ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇನ್ನಷ್ಟು ಪ್ರವಾಹ ಉಂಟಾಗುವ ಸಾಧ್ಯತೆ ಇದೆ. ದಕ್ಕಾಗಿ ಕಲಬುರ್ಗಿ ಜಿಲ್ಲಾಡಳಿತ ನದಿ ತೀರದ ಗ್ರಾಮಗಳನ್ನು ಸ್ಥಳಾಂತರಿಸಲು ಮುಂದಾಗಿದೆ.
ಕರಾವಳಿಯ ಜಿಲ್ಲೆಗಳು ಸೇರಿದೆ ವಿವಿಧೆಡೆ ಅಕ್ಟೋಬರ್ 20 ರಿಂದ ಮೂರು ದಿನಗಳ 64 ಸೆಂ.ಮೀ ನಿಂದ 115 ಸೆಂ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅ.20 ರಿಂದ 24ರವರೆಗೆ ಯೆಲ್ಲೋ ಅಲರ್ಟ್, ಅಕ್ಬೋಬರ್ 20 ರಂದು ಯಾದಗಿರಿ, ರಾಯಚೂರು, ಕಲಬುರಗಿ, ಬೀದರ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರಿ 21 ರಿಂದ 22 ರವರೆಗೆ ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟ, ಹಾಸನ, ಕೊಡಗು, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
                
                
                                        
                                        
                        
                        
                        
                        
                        
        
Share your comments