1. ಸುದ್ದಿಗಳು

ಇನ್ನೆರೆಡು ದಿನ ಭಾರಿ ಮಳೆ ಸಾಧ್ಯತೆ-10 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 14 ಮತ್ತು 15 ರಂದು ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಅ.14 ಮತ್ತು 15ರಂದು ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಅವಧಿಯಲ್ಲಿ 204 ಮಿಮೀ. ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಕೊಪ್ಪಳ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಿದೆ. ಅ.16ರವರೆಗೆ ರಾಜ್ಯದ ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಈಗಾಗಲೇ ಕಳೆದ ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಇನ್ನೂ ಮುರು ದಿನಗಳ  ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆಯಿದೆ.

Published On: 14 October 2020, 09:05 AM English Summary: weather Heavy rainfall in karnataka

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.