News

ಅ. 23 ರವರೆಗೆ ರಾಜ್ಯದಲ್ಲಿ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್ ಘೋಷಣೆ

21 October, 2020 11:37 AM IST By:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ  ರಾಜ್ಯದೆಲ್ಲೆಡೆ ಮಳೆ ಮುಂದುವರೆದಿದ್ದು, ಬೆಂಗಳೂರು ನಗ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಇನ್ನೂ ಎರಡು-ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಿನಾದ್ಯಂತ ಗುಡುಗು, ಸಿಡಿಲುಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿ ಅಪಾರ ನಷ್ಟವಾಗಿತ್ತು. ಒಂದೆಡೆ ಪ್ರವಾಹದ ಇಳಿಮುಖವಾಗುತ್ತಿರುವುದರಿಂದ ಸ್ವಲ್ಪ ನೆಮ್ಮದಿಯಾಗಿದ್ದ ಜನತೆಗೆ ಅ. 23ರವರೆಗೆ ಮಳೆ ಸುರಿಯುವ ಸಾಧ್ಯತೆ ಆತಂಕ ಸೃಷ್ಟಿ ಮಾಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರಗಿ, ಧಾರವಾಡ, ಬಳ್ಳಾರಿ, ಗದಗ,  ಹಾಗೂ ದಾವಣಗೆರೆ, ಚಿತ್ರದುರ್ಗ, ಜಿಲ್ಲೆಗಳಲ್ಲಿ ಮಳೆಯಾಗಿದೆ.

ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅಕ್ಟೋಬರ್ 24 ರ ನಂತರ ಮುಂಗಾರು ಕ್ಷೀಣಿಸುವ ಸಾಧ್ಯತೆಯಿದೆ.

 ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ನಾಲ್ಕೂ ದಿನ ಮೀನುಗಾರರು ಸಮುದ್ರಕ್ಕೆ  ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ