ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಇನ್ನು ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 41.62 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಗಳು: ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಮತ್ತು ಬೆಂಗಳೂರು ನಗರ,
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ
ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಇನ್ನು ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ,
ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ರಾಜ್ಯದಾದ್ಯಂತ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಗುಡುಗು ಮುನ್ನೆಚ್ಚರಿಕೆ: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ.
ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಮುನ್ನೋಟ: ಗರಿಷ್ಠ ಉಷ್ಣಾಂಶವು ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಅಲ್ಲದೇ ಭಾರೀ ಮಳೆಯಾಗುವ ಸಾಧ್ಯತೆ ಇಲ್ಲದೆ ಇರುವುದರಿಂದಾಗಿ ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆ,
ಮಿಂಚುಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಉತ್ತರ ಒಳನಾಡಿನ ಭಾಗದಲ್ಲಿ ಒಣಹವಾಮಾನ ಇತ್ತು.
ಮಳೆ ಪ್ರಮಾಣ ಸೆಂ.ಮೀನಲ್ಲಿ: ಪುತ್ತೂರು, ಕುಂದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.
ಮಣಿ, ಕಾರ್ಕಳ, ಭಾಗಮಂಡಲದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕೋಟ, ಪಣಂಬೂರು,
ಹುಣಸೂರು, ಸಿರಾ ಭಾಗದಲ್ಲಿ ತಲಾ ಒಂದು ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
Pic Credits: pexels