News

ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸೂಚನೆ: ಹವಾಮಾನ ವರದಿ

30 May, 2023 11:23 AM IST By: Maltesh

ರಾಜ್ಯದಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಅಲ್ಲಲ್ಲಿ ತುಂತುರ ಮಳೆ ಆರಂಭವಾಗಿದ್ದರೆ ಇತ್ತ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ್, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗುಡುಗು ಮುನ್ನೆಚ್ಚರಿಕೆ: ದಿನ 24 ಘಂಟೆಗಳು ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಘಂಟೆಗೆ 40 ರಿಂದ 50 ಕಿ.ಮೀ. ಇರುವ ಸಾಧ್ಯತೆ ಇದ್ದು, ಕರಾವಳಿಯಲ್ಲಿ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ದಕ್ಷಿಣ ಒಳನಾಡಿನಲ್ಲಿ ಘಂಟೆಗೆ 40 ರಿಂದ 50 ಕಿ.ಮೀ. ಇರುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶದ ಮುನ್ಸೂಚನೆ: ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಬಲವಾದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 40 ರಿಂದ 50 ಕಿ.ಮೀ. ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಬಲವಾದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.